Cold wave : ರಾಜ್ಯದ ಆರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ತೀವ್ರ ಕೋಲ್ಡ್ ವೇವ್ (ಶೀತ ಗಾಳಿ) ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮಳೆ, ಮೋಡ ಇಲ್ಲದ ಕಾರಣ ಶುಭ್ರಾಕಾಶ ನಿರ್ಮಾಣ, ಕನಿಷ್ಠ ಉಷ್ಣಾಂಶದಲ್ಲಿ ಸುಮಾರು 5 ಡಿಗ್ರಿ ಸೆಲ್ಸಿಯಸ್ ನಷ್ಟು ಇಳಿಕೆ ಹಾಗೂ ಉತ್ತರ ದಿಕ್ಕಿನಿಂದ ದಕ್ಷಿಣ ದಿಕ್ಕಿನ ಕಡೆ ಗಾಳಿ ಬೀಸುತ್ತಿರುವುದರಿಂದ ಉತ್ತರ ಒಳನಾಡಿನ ಆರು ಜಿಲ್ಲೆಗಳಲ್ಲಿ ಶೀತ ಅಲೆ ಕಾಣಿಸಿಕೊಂಡಿದೆ. ಇನ್ನೂ ಎರಡು ದಿನ ಶೀತ ಅಲೆ ಬೀಸಲಿದೆ.
ಈ ಹಿನ್ನೆಲೆಯಲ್ಲಿ ಬೀದರ್, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಯಲ್ಲಿ ತೀವ್ರ ಶೀತ ಅಲೆ ಸಾದ್ಯತೆ ಇರುವುದರಿಂದ ರೆಡ್ ಅಲರ್ಟ್, ಯಾದಗಿರಿ, ಬಾಗಲಕೋಟೆ ಹಾಗೂ ರಾಯಚೂರುಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಡಿಸೆಂಬರ್ 18 ಕ್ಕೆ ಬೀದರ್, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನ ಶೀತ ಅಲೆಯ ಎಚ್ಚರಿಕೆ ನೀಡಲಾಗಿದೆ.
ಮಂಗಳವಾರ ಬೀದರ್ ಹಾಗೂ ವಿಜಯಪುರದಲ್ಲಿ ತಲಾ 8 ಡಿ. ಸೆಲ್ಸಿಯಸ್ ಗಿಂತ ಅತಿ ಕಡಿಮೆ ಕನಿಷ್ಠಉಷ್ಣಾಂಶ ದಾಖಲಾಗಿದೆ. ಉಳಿದಂತೆ ಬೆಳಗಾವಿಯಲ್ಲಿ 9 ಡಿಗ್ರಿ ಸೆಲ್ಸಿಯಸ್, ಧಾರವಾಡದಲ್ಲಿ 10 ಡಿಗ್ರಿ ಸೆಲ್ಸಿಯಸ್, ಬೆಂಗಳೂರಿನಲ್ಲಿ 16 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ : Job direct interview ಡಿಸೆಂಬರ್ 20 ರಂದು ಉದ್ಯೋಗ ಮೇಳ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ದಕ್ಷಿಣ ಒಳನಾಡು ಸೇರಿದಂತೆ ವಿವಿಧ ಭಾಗದಲ್ಲಿ ಹಗುರು ಮಳೆಯಾಗುವ ಸಾಧ್ಯತೆಯಿದೆ. ಇದರ ಪರಿಣಾಮದಿಂದ ರಾಜ್ಯದಲ್ಲಿ ಚಳಿಯ ಪ್ರಮಾಣ ಸ್ವಲ್ಪ ಮಟ್ಟಿಗೆ ಕಡಿಮೆ ಆಗಲಿದೆ. ಆನಂತರ ಮತ್ತೆ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ತಜ್ಞ ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದಾರೆ.
Cold wave 23 ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ
ರಾಜ್ಯದ 23 ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ 3ರಿಂದ 5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಕುಸಿತವಾಗಿದೆ. ಡಿ. 20 ರಿಂದ ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗಿದ್ದ ಉಷ್ಣಾಂಶ ಹೆಚ್ಚಳವಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಕಲಬುರಗಿಯಲ್ಲಿ ಶೀತಗಾಳಿ ರೆಡ್ ಅಲರ್ಟ್
ಕಲಬುರಗಿ ಜಿಲ್ಲೆಯಲ್ಲಿ ಡಿಸೆಂಬರ್ 18 ಹಾಗೂ 19 ರಂದು ಎರಡು ದಿನಗಳ ಕಾಲ ಅತೀಯಾದಂತ ಶೀತ ಗಾಳಿ ಬೀಸುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆಯವರು ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಡಿಸೆಂಬರ್ 18 ರಂದು ರೆಡ್ ಅಲರ್ಟ್ ಹಾಗೂ ಡಿಸೆಂಬರ್ 19 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಮೇಲಿನ ಎರಡು ದಿನಗಳ ಕಾಲ ಸಾಮಾನ್ಯ ತಾಪಮಾನಕ್ಕಿಂತ 5 ರಿಂದ 6 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ಕುಸಿಯುವ ಸಾಧ್ಯತೆ ಇರುತ್ತದೆ. ಹೀಗಾಗಿ ಸಾರ್ವಜನಿಕರು2 ದಿನ ಹೆಚ್ಚು ಸಂಚಾರ ಮಾಡದೆ ಸುರಕ್ಷಿತವಾಗಿರುವಂತೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಹೇಳಿದ್ದಾರೆ.
ಅತೀ ಶೀತ ಮಾರುತಗಳು ಬೀಸುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬೈಕ್ ಗಳಲ್ಲಿ ಹೊರಗಡೆ ಓಡಾಟ ನಡೆಸದಂತೆ ಮನವಿ ಮಾಡಿದ್ದಾರೆ.
ಚಳಿಯಿಂದ ರಕ್ಷಿಸಿಕೊಳ್ಳಲು ಸ್ವೆಟರ್ ಬಳಸಬೇಕು. ರೈತರು ರಾತ್ರಿ ಹೊಲಗದ್ದೆಗಳಲ್ಲಿ ತಂಗದಂತೆ ಮನವಿ ಮಾಡಿದ್ದಾರೆ.
ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ
ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ರಾಜ್ಯದ ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲೆಗಳು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ, ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕಮಟೀನಗರ ಪೇಟೆ – 1, ಭೋವಿ ಕಾಲೋನಿ ಕೇಂದ್ರಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಚಿಕ್ಕಬಳ್ಳಾಪುರ, ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಶಿಡ್ಲಘಟ್ಟ ಅರ್ಜಿಗಳನ್ನು ಜನವರಿ 10 ರೊಳಗಾಗಿ ಪಡೆದು ಸಲ್ಲಿಸಬೇಕು.. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ. ಮಹಿ ಳಾಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿಕ್ಕಬಳ್ಳಾಪುರ ಮೊಬೈಲ್ ಸಂಖ್ಯೆ 7795520866 ಕಚೇರಿಗೆ ದೂರವಾಣಿ ಮೂಲಕ ಸಂಪರ್ಕಿಸಬಹುದು
ದಾವಣಗೆರೆ ಜಿಲ್ಲೆಯ ದಾವಣಗೆರೆ ಮತ್ತು ಹರಿಹರ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 30 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಕಚೇರಿಯಲ್ಲಿ ಅರ್ಜಿಯನ್ನು ಪಡೆದು ಜನವರಿ 13 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ದಾವಣಗೆರೆ ದೂರವಾಣಿ ಸಂಖ್ಯೆ 08192-264056 ಗೆ ಸಂಪರ್ಕಿಸಲು ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ ತಿಳಿಸಿದ್ದಾರೆ.