Anganawadi job: ಎಸ್ಎಸ್ಎಲ್ಸಿ ಪಾಸಾದ ಮಹಿಳೆಯರಿಗೆ ಗುಡ್ ನ್ಯೂಸ್ ಇಲ್ಲಿದೆ. ಹೌದು, ಯಾರು ಯಾರು ಎಸ್ಎಸ್.ಎಲ್.ಸಿ ಉತ್ತೀರ್ಣರಾಗಿದ್ದಾರೋ ಅವರು ತಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿಯೇ ಅಂಗನವಾಡಿ ಕಾರ್ಯಕರ್ತೆ ಹಾಗೂಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗ ಪಡೆದುಕೊಳ್ಳಬಹುದು.
ಹೌದು, ರಾಜ್ಯದ ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲೆಗಳು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ, ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ.
Anganawadi job ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಅರ್ಜಿ ಆಹ್ವಾನ
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕಮಟೀನಗರ ಪೇಟೆ – 1, ಭೋವಿ ಕಾಲೋನಿ ಕೇಂದ್ರಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಎಫ್.ಬಿ.ಎಫ್.ಬಿ -05. ಮೊದಲ ಮಹಡಿ, ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ, ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ, ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಶಿಡ್ಲಘಟ್ಟ ಅರ್ಜಿಗಳನ್ನು ಜನವರಿ 10 ರೊಳಗಾಗಿ ಪಡೆದು ಸಲ್ಲಿಸಬೇಕು.. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ. ಮಹಿ ಳಾಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿಕ್ಕಬಳ್ಳಾಪುರ ಮೊಬೈಲ್ ಸಂಖ್ಯೆ 7795520866 ಕಚೇರಿಗೆ ದೂರವಾಣಿ ಮೂಲಕ ಸಂಪರ್ಕಿಸಬಹುದು. ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲೆಯಿಂದ ಅರ್ಜಿ ಆಹ್ವಾನ
ಅದೇ ರೀತಿ ದಾವಣಗೆರೆ ಜಿಲ್ಲೆಯ ದಾವಣಗೆರೆ ಮತ್ತು ಹರಿಹರ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 30 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ Job direct interview ಡಿಸೆಂಬರ್ 20 ರಂದು ಉದ್ಯೋಗ ಮೇಳ
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಕಚೇರಿಯಲ್ಲಿ ಅರ್ಜಿಯನ್ನು ಪಡೆದು ಜನವರಿ 13 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ದಾವಣಗೆರೆ ದೂರವಾಣಿ ಸಂಖ್ಯೆ 08192-264056 ಗೆ ಸಂಪರ್ಕಿಸಲು ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ ತಿಳಿಸಿದ್ದಾರೆ.
ಡಿಸೆಂಬರ್ 20 ರಂದು ನೇರ ಸಂದರ್ಶನ
ಗದಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನೇರ ಸಂದರ್ಶವಿದ್ದು, ಡಿಸೆಂಬರ್ 20 ರಂದು ಬೆಳಗ್ಗೆ 9.30 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ 2ನೇ ಮಹಡಿ ರೂಪನಂ. 215, ಜಿಲ್ಲಾಡಳಿತ ಭವನದಲ್ಲಿನೇರ ಸಂದರ್ಶ ಹಮ್ಮಿಕೊಳ್ಳಲಾಗಿದೆ.
ನೇರ ಸಂದರ್ಶದಲ್ಲಿ ಚೈತನ್ಯ ಇಂಡಿಯಾ ಫೈನಾನ್ಸ್ ಕ್ರೆಡಿಟ್ ಪ್ರೈವೆಟ್ ಲಿಮಿಟೆಡ್, ಬೆಟಗೇರಿ ಗದಗ ಕಂ. ಭಾಗವಹಿಸಲಿದ್ದು ವಿದ್ಯಾರ್ಹತೆ ಎಸ್ಎಸ್.ಎಲ್.ಸಿ, ಪಿಯುಸಿ , ಡಿಪ್ಲೋಮಾ ಹಾಗೂ ಯಾವುದೇಪದವಿ ಪಾಸಾದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಕಸ್ಟರ್ ರಿಲೇಶನಶಿಪ್ ಆಫೀಸರ್ ಹುದ್ದೆಗೆ ಕಡ್ಡಾಯವಾಗಿ ದ್ವಿಚಕ್ರ ವಾಹನ ಹೊಂದಿರಬೇಕು. ವಯಸ್ಸು18 ರಿಂದ 28, ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದು.ಜಿಂದಾಲ್ ಸವರಫಿಲ್ಡ್ ಸ್ಟ್ರಕ್ಚರ್ಸ್ ಲಿಮಿಟೆಡ್ ತೋರನಗಲ್, ವಿದ್ಯಾರ್ಹತೆ ಐಟಿಐ ಎಲ್ಲಾ ಟ್ರೇಡ್ ಗಳು, ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ನೇರ ಸಂದರ್ಶನದಲ್ಲಿಪಾಲ್ಗೊಳ್ಳುವ ಅಭ್ಯರ್ಥಿಗಳುತಮ್ಮ ವಿದ್ಯಾರ್ಹತೆಯ ಅಂಕಪಟ್ಟಿಗಳ ಝರಾಕ್ಸ್ ಪ್ರತಿಗಳು, 3 ರೆಸ್ಯೂಮ್ (ಬಯೋಡಾಟಾ)ಪ್ರತಿಗಳು ಮತ್ತು ಆಧಾರ್ ಕಾರ್ಡ್ ಝರಾಕ್ಸ್ ದೊಂದಿಗೆ ಭಾಗವಹಿಸಬಹುದು.
ನೇರ ಸಂದರ್ಶನದಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ ನೋಂದಣಿ ಕಡ್ಡಾಯವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 6363330688 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಬಸವಂತ ಪಿ.ಎನ್.ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ನೋಂದಣಿಯನ್ನು ನೇರ ಸಂದರ್ಶದ ದಿನದಂದೇ ಮಾಡಿಸಬೇಕಾಗಿರುತ್ತದೆ.