Free Goat training : ಕುರಿ, ಮೇಕೆ ಸಾಕಾಣಿಕೆಯಲ್ಲಿ ಆಸಕ್ತಿಯಿರುವ ರೈತರಿಗೆ ಗುಡ್ ನ್ಯೂಸ್. ಹೌದು, 10 ದಿನಗಳಕಾಲ ಉಚಿತ ತರಬೇತಿ ಹಾಗೂ 20 ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ.
ಶ್ರೀ ಧರ್ಮಸ್ಥಳ ಮಂಜನಾಥೇಶ್ವರ ಶಿಕ್ಷಣ ಟ್ರಸ್ಟ್ ಹಾಗೂ ಕೆನರಾ ಬ್ಯಾಂಕ್ ಸಹಯೋಗದಲ್ಲಿ ರುಡ್ ಸೆಟ್ ಸಂಸ್ಥೆಯ ವತಿಯಿಂದ ಡಿಸೆಂಬರ್ 26 ರಿಂದ ಕುರಿ ಮತ್ತು ಮೇಕೆ ಸಾಕಾಣಿಕೆ ಕುರಿತು 10 ದಿನಗಳ ಕಾಲ ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದೆ.
ಬಿಪಿಎಲ್ ಕಾರ್ಡ್ ಹೊದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಡಿಸೆಂಬರ್ 23 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
Free Goat training ಯಾರಿಗೆ ಸಂಪರ್ಕಿಸಬೇಕು?
ರುಡ್ ಸೆಟ್ ಸಂಸ್ಥೆ, ಅರಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ (ಮೊಬೈಲ್ ಸಂಖ್ಯೆ 9380162042, 9241482541, 9740982585 ಗೆ ಸಂಪರ್ಕಿಸಲು ಕೋರಲಾಗಿದೆ.
ಉಚಿತ ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ
ಪಶುಸಂಗೋಪನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ 2024-25ನೇ ಸಾಲಿಗೆ ಐದು ವಾರದ ಕೋಳಿ ಮರಿಗಳನ್ನು ಉತ್ಪಾದಿಸಿ ಗ್ರಾಮೀಣ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ತಲಾ 20 ರಂತೆ ವಿತರಿಸುವ ಕಾರ್ಯಕ್ರಮದಡಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ : Surya Ghar scheme ಯಡಿ ಉಚಿತ ವಿದ್ಯುತ್ ಹೀಗೆ ಪಡೆಯಿರಿ
ಆಸಕ್ತರು ಡಿಸೆಂಬರ್ 23 ರೊಳಗಾಗಿ ಜಿಲ್ಲೆಯ ಆಯಾ ತಾಲೂಕು ಪಶು ಆಸ್ಪತ್ರೆಗಳಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಮುಖ್ಯ ಪಶು ವೈದ್ಯಾಧಿಕಾರಿಗಳು (ಆಡಳಿತ), ಯೋಜನಾ ಅನುಷ್ಠಾನಾಧಿಕಾರಿಗಳಾಗಿರುವ ಸಹಾಯಕ ನಿರ್ದೇಶಕರು, ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳಿ ನಿಯಮಿತ ಪಶು ಆಸ್ಪತ್ರೆ ಆವರಣ ಕಲಬುರಗಿ 9448636316 ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಪಶು ಸಂಗೋಪನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯ ಉಪ ನಿರ್ದೇಶಕಡಾ. ಎಸ್.ಡಿ. ಅವಟೆ ತಿಳಿಸಿದ್ದಾರೆ. ತಾಲೂಕುವಾರು ಪಶು ಆಸ್ಪತ್ರೆ ಮುಖ್ಯ ವೈದ್ದಾಧಿಕಾರಿಗಳು ಕಲಬುರಗಿ ತಾಲೂಕಿನ ರೈತರು 9008167863, ಆಳಂದ ತಾಲೂಕಿನ ರೈತರು9449016276, ಅಫಲ್ಪೂರ ತಾಲೂಕಿನ ರೈತರು 9108055571, ಚಿಂಚೋಳಿ ತಾಲೂಕಿನ ರೈತರು 7022638132, ಜೇವರ್ಗಿ ತಾಲೂಕಿನ ರೈತರು 9686133232, ಸೇಡಂ ತಾಲೂಕಿನ ರೈತರು 9972906081 ಹಾಗೂ ಚಿತ್ತಾಪುರ ತಾಲೂಕಿನ ರೈತರು 9611732647 ಗೆ ಸಂಪರ್ಕಿಸಲು ಕೋರಲಾಗಿದೆ.
ಉಚಿತವಾಗಿ ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ
ಉಚಿತವಾಗಿ 20 ಕೋಳಿ ಮರಿಗಳನ್ನು ಉಚಿತವಾಗಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು, 2024-25ನೇ ಸಾಲಿನ 5 ವಾರದ ಕೋಳಿ ಮರಿಗಳನ್ನು ಉತ್ಪಾದಿಸಿ ಉಚಿತವಾಗಿ ವಿತರಿಸಲಾಗುವುದು ಎಂದು ಯಾದಗಿರಿ ಪಶುಪಾಲನಾ ಇಲಾಖೆ ಉಪ ನಿರ್ದೇಶಕ (ಆಡಳಿತ) ಡಾ. ರಾಜು ದೇಶಮುಖ ಅವರು ತಿಳಿಸಿದ್ದಾರೆ.
ಯಾರು ಯಾರಿಗೆ ಉಚಿತ ಕೋಳಿ ವಿತರಿಸಲಾಗುವುದು?
ಕರ್ನಾಟಕ ಸಹಕಾರ ಕುಕ್ಕಟ ಮಂಡಳಿ ನಿಯಮಿತ ವತಿಯಿಂದ 5 ವಾರದ ಕೋಳಿಮರಿಗಳನ್ನು ಉತ್ಪಾದಿಸಿ ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ತಲಾ 20 ರಂತೆಕೋಳಿ ಮರಿಗಳನ್ನು ವಿತರಿಸಿ ಅವರ ಆದಾಯ ಹೆಚ್ಚಿಸುವ ಕಾರ್ಯಕ್ರಮಕ್ಕೆ ಸಂಬಂಧಿಸಿದ ಮಹಿಳಾ ರೈತರಿಂದ ಜಿಲ್ಲೆಯ ಎಲ್ಲಾ ತಾಲೂಕಿನ ಪಶು ವೈದ್ಯಾಧಿಕಾರಿಗಳು (ಆಡಳಿತ)ಅಥವಾ ಸಹಾಯಕ ನಿರ್ದೇಶಕರು ಕಚೇರಿ ಸಮಯದಲ್ಲಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಪಶು ವೈದ್ಯ ಸಂಸ್ಥೆ ಅಥವಾ ತಾಲೂಕು ಸಹಾಯಕ ನಿರ್ದೇಶಕರು ಕಚೇರಿಗೆ ಡಿಸೆಂಬರ್ 23 ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಸು ಪಾಲನೆಯಲ್ಲಿ ಆಸಕ್ತಿಯಿರುವ ರೈತರು ಈಗ ತಮ್ಮ ಮನೆಯಲ್ಲಿಯೇ ಕುಳಿತು ಉಚಿತ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದು. ಹೌದು, ಕುರಿ, ಮೇಕೆ, ಕೋಳಿ ಸಾಕಾಣಿಕೆ, ಹೈನುಗಾರಿಕೆಯ ಕುರಿತು ಸೇರಿದಂತೆ ಪಶುಪಾಲನೆಯಲ್ಲಿ ಉಂಟಾಗುವ ಸಮಸ್ಯೆಗಳಿಗೆ ಪರಿಹಾರ ಸಹ ನೀಡಲಾಗುವುದು. ಹಾಗಾಗಿ ರೈತರು 8277200300 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.