Anganawadi job selection list : ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಸಲ್ಲಿಸಿದ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ. ನಿಮ್ಮ ಹೆಸರು ಹೀಗೆ ಚೆಕ್ ಮಾಡಿ.
ಕಲಬುರಗಿ ಜಿಲ್ಲೆಯ ಅಫಜಲ್ಪುರ, ಚಿಂಚೋಳಿ, ಚಿತ್ತಾಪುರ, ಕಲಬುರಗಿ ಗ್ರಾಮಾಂತರ, ಕಲಬುರಗಿ ನಗರ, ಜೇವರ್ಗಿ, ಸೇಡ ಹಾಗೂ ಶಹಾಬಾದ್ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಹುದ್ದೆಗಳಿಗೆ 2022-23ನೇ ಸಾಲಿನಲ್ಲಿ (141 ಮತ್ತು465 ಹುದ್ದೆಗಳಿಗೆ) ಒಂದು ಬಾರಿಗೆ ಆಫಲೈನ್ ಮೂಲಕ ಅರ್ಜಿ ಆಹ್ವಾನಿಸಿ ದಿನಾಂಕ02-01-2025 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಆಯ್ಕೆ ಸಮಿತಿ ಸಭೆ ನಡೆಸಿ, ಅಭ್ಯರ್ಥಿಗಳು ಸಲ್ಲಿಸಿದ ದಾಖಲಾತಿಗಳ ಆಧಾರದ ಮೇಲೆ ಅಂತಿಮವಾಗಿ ತಾತ್ಕಾಲಿವಾಗಿ ಆಯ್ಕೆ ಪಟ್ಟಿ ಹೊರಡಿಸಲಾಗಿದೆ.
ಈ ಅಭ್ಯರ್ಥಿಗಳ ಪಟ್ಟಿಯನ್ನು ಸಂಬಂಧಪಟ್ಟ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸೂಚನಾ ಫಲಕಕ್ಕೆ ಪ್ರಕಟಿಸಲಾಗಿದ್ದು, ಈ ತಾತ್ಕಾಲಿಕ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕ್ಷೇಪಣೆ ಇದ್ದಲ್ಲಿ 7 ದಿನದೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ ಎಂದು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ತಾತ್ಕಾಲಿಕ ಅಂತಿಮಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಧ್ಯವರ್ತಿಗಳು ಮತ್ತು ಇತರೆ ಬೇರೆ ಯಾರಾದರೂ ಇಲಾಖೆಯ ಸಿಬ್ಬಂದಿಗಳ ಹೆಸರು ಹೇಳಿ ಹಣ ಕೇಳಿದ್ದಲ್ಲಿ ತಕ್ಷಣ ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ದೂರವಾಣಿ ಸಂಖ್ಯೆ 08472 278659 ಸಂಖ್ಯೆಗೆ ಕರೆ ಮಾಡಿ ತಿಳಿಸಬೇಕು ಅಥವಾ ಕಚೇರಿಗೆ ದೂರು ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ.
Anganawadi job selection list ಅರ್ಜಿದಾರರ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ
ಮಹಾನಗರ ಪಾಲಿಕೆ 2024-25ನೇ ಸಾಲಿಗಾಗಿಶೇ. 24.10 ಯೋಜನೆಯ 2019-20ನೇ ಸಾಲಿನ ಪಾಲಿಕೆ ನಿಧಿ ಪರಿಷ್ಕೃತ ಕ್ರಿಯಾ ಯೋಜನೆ, ಅನುದಾನದಡಿ ಪರಿಶಿಷ್ಟ ಪಂಗಡದ ಜನರಿಗೆ ಲಘುವಾಹನ ತರಬೇತಿಗಾಗಿ ಅರ್ಜಿ ಆಹ್ವಾನಿಸಿ ಅರ್ಹ ಹಾಗೂ ಅನರ್ಹ ಅರ್ಜಿದಾರರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಲಬುರಗಿ ಮಹಾನಗರ ಪಾಲಿಕೆಯ ನೋಟಿಸ್ ಬೋರ್ಡ್ ನಲ್ಲಿ ಈಗಾಗಲೇ ಪ್ರಕಟಿಸಲಾಗಿದೆ.
ಇದನ್ನೂ ಓದಿ Yuvanidhi yojane ಯಡಿ ನಿರುದ್ಯೋಗಿಗಳಿಗೆ ಇಲ್ಲಿ 3 ಸಾವಿರ ಸಿಗಲಿದೆ
ಈ ಮೇಲ್ಕಂಡ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ 2025ರ ಜನವರಿ 21 ರೊಳಗಾಗಿ ಕಲಬುರಗಿ ಮಹಾನಗರ ಪಾಲಿಕೆ ಕಚೇರಿಯಲ್ಲಿ ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅವರು ಕಲಬುರಗಿ ಮಹಾನಗರ ಪಾಲಿಕೆ ಉಪ ಆಯುಕ್ತರು (ಆಡಳಿತ) ಅವರು ತಿಳಿಸಿದ್ದಾರೆ.
ಹೈನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯಿಂದ ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 45 ವಯೋಮಾನದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಜನವರಿ ತಿಂಗಳಲ್ಲಿ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ ಮತ್ತು ಫೆಬ್ರವರಿ ತಿಂಗಳಲ್ಲಿ ಮಹಿಳೆಯರಿಗೆ ವಸ್ತ್ರ ವಿನ್ಯಾಸ (ಹೊಲಿಗೆ) ಉಚಿತ ತರಬೇತಿಗಳು ಆರಂಭವಾಗಲಿದ್ದು, ತರಬೇತಿ ಅವಧಿಯಲ್ಲಿ ಊಟ ಹಾಗೂ ವಸತಿಯು ಉಚಿತವಾಗಿರುತ್ತದೆ.
ಅಭ್ಯರ್ಥಿಗಳು ತಮ್ಮ ಹೆಸರು ವಿಳಾಸಗಳನ್ನು ನೋಂದಾಯಿಸಲು ಜನವರಿ 10 ಕೊನೆಯ ದಿನವಾಗಿದೆ. ಮೊದಲು ಬಂದವರಿಗೆಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯಸಾಫ್ಟ್ ಸ್ಕಿಲ್ಸ್ ಯೋಗ ತರಬೇತಿ ಹಾಗೂ ಬ್ಯಾಂಕಿಂದ ಸಾಲ ಪಡೆದು ಸ್ವ ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರ್ಕಾರ ಯೋಜನೆಗಳು ಮತ್ತುಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿ ಉಚಿತವಾಗಿ ನೀಡಲಾಗುವುದು.
ಆಸಕ್ತರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್.ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ, ಈ ವಿಳಾಸಕ್ಕೆ ದೂರವಾಣಿ ಸಂಖ್ಯೆ 8970145354,9483485489, 9482188780 ಗೆ ಸಂಪರ್ಕಿಸಬಹುದು.