PM kisan Registration

PM kisan Registration: ಪಿಎಂ ಕಿಸಾನ್ ಯೋಜನೆಗೆ ರೈತರು ಈಗಲೂ ನೋಂದಣಿ ಮಾಡಬಹುದು. ಹೌದು, ರೈತರು ಪಿಎಂ ಕಿಸಾನ್ ಯೋಜನೆಗೆ ಹೇಗೆ ನೋಂದಣಿ ಮಾಡಬೇಕು ಎಂಬುದರ ಮಾಹಿತಿ ಇಲ್ಲಿದೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಇನ್ನೂ ಹಲವಾರು ಮಂದಿ ತಮ್ಮ ಹೆಸರನ್ನು ಸೇರಿಸದೆ ಇರುವ ಕಾರಣ ಅವರಿಗೆ ಹಣ ಜಮೆಯಾಗಿಲ್ಲ. ಆದ್ದರಿಂದ ಕೂಡಲೇ ಫಲಾನುಭವಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕೆಂದು ತಾಲೂಕು ಕೃಷಿ ಇಲಾಖೆಯ ಸಹಾಯಕಕೃಷಿ ನಿರ್ದೇಶಕಿ ಪೂಜಾ ತಿಳಿಸಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಲಾಭ ಪಡೆಯಲು ಕುಟುಂಬದ ಸದಸ್ಯರು ಏಕ ವ್ಯಕ್ತಿಗೆ ಅಧಿಕಾರ ನೀಡಬೇಕು. ಜಮೀನಿರುವ ವ್ಯಕ್ತಿಗಳ ಪಡಿತರ ಪತ್ರದಲ್ಲಿ ಒಂದಕ್ಕಿಂತ ಹೆಚ್ಚು ಮಂದಿಯ ಹೆಸರಿದ್ದರೆ ಕುಟುಂಬದ ಸದಸ್ಯರು ಒಡಂಬಡಿಕೆ ಮಾಡಿಕೊಂಡು ಸದಸ್ಯರಲ್ಲಿ ಒಬ್ಬರಿಗೆ ಆಧಾರ್ ಲಿಂಕ್ ಮಾಡಿಕೊಳ್ಳಬೇಕೆಂದು ಸೂಚಿಸಿದರು.

ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡುವುದುಹೇಗೆ?

ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಲು ಈ

https://pmkisan.gov.in/RegistrationFormNew.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ಓಪನ್ ಆಗುತ್ತದೆ. ಅಲ್ಲಿನೀವು ಗ್ರಾಮೀಣ ಪ್ರದೇಶದವರಾಗಿದ್ದರೆ Rural Farmer Registration ನಗರ ಪ್ರದೇಶದವರಾಗಿದ್ದರೆ urban Farmer Registration ಆಯ್ಕೆಮಾಡಿಕೊಳ್ಳಬೇಕು.  ನಂತರ ನಿಮ್ಮ ಆಧಾರ್ ಕಾರ್ಡ್ ನಮೂದಿಸಬೇಕು. ಇದಾದ ನಂತರ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ನಂತರ ನಿಮ್ಮ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಓಟಿಪಿ ಮೇಲೆಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿ ನಮೂದಿಸಿ ನೀವು ಅಲ್ಲಿ ಕೇಳಿದ  ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ನೋಂದಣಿ ಮಾಡಬಹುದು.

PM kisan Registration ಪಿಎಂ ಕಿಸಾನ್ ಹಣ ನಿಮ್ಮ ಖಾತೆಗೆ ಜಮೆಯಾಗಿದೆಯೇ? ಇಲ್ಲೇ ಚೆಕ್ ಮಾಡಿ ನೋಡಿ

ಹೌದು,ರೈತರು ಪಿಎಂ ಕಿಸಾನ್ ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡಲು ಈ

https://pmkisan.gov.in/BeneficiaryStatus_New.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಆಗ ನಿಮಗೆ ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡುವ ಪೇಜ್ ಓಪನ್ ಆಗುತ್ತದೆ. ಅಲ್ಲಿ Enter Registration No ನಲ್ಲಿ ರೈತರು  ಪಿಎಂ ಕಿಸಾನ್ ಯೋಜನೆಯ ನೋಂದಣಿ ಸಂಖ್ಯೆ ನಮೂದಿಸಬೇಕು. ನಂತರ ಅಲ್ಲಿ ಕಾಣುವ  Captcha Code ಹಾಕಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲಿಗೆ ಓಟಿಪಿ ಸಂದೇಶ ಬರುತ್ತದೆ. ಆ ಓಟಿಪಿ ನಮೂದಿಸಿ ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಚೆಕ್ ಮಾಡಬಹುದು.

ಬಹುತೇಕ ರೈತರಿಗೆ ಪಿಎಂ ಕಿಸಾನ್ ನೋಂದಣಿ ಸಂಖ್ಯೆ ನೆನಪಿರುವುದಿಲ್ಲ. ಯಾರಿಗೆ ನೋಂದಣಿ ಸಂಖ್ಯೆ ನೆನಪಿಲ್ಲವೋ  ಆ ರೈತರು ಅಲ್ಲಿ ಕಾಣುವ Know your Registration ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲ್ ನಂಬರ್  ನಮೂದಿಸಿ ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಮೊಬೈಲ್ ನಂಬರ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ ಕುರಿ ಮೇಕೆ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ನಿಮ್ಮ ಓಟಿಪಿ ನಮೂದಿಸಿ ನಿಮಗೆ ಇಲ್ಲಿಯವರೆಗೆ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ನಿಮಗೆ ಹಣ ಜಮಯಾಗಿರುವುದನ್ನು ಚೆಕ್ ಮಾಡಬಹುದು.

ಪಿಎಂ ಕಿಸಾನ್ ಹಣ ಜಮೆಯಾಗಿಲ್ಲವೇ?

ಪಿಎಂ ಕಿಸಾನ್ ಯೋಜನೆಯ 16 ನೇ ಕಂತು ಜಮೆಯಾಗಿಲ್ಲವೇ? ನಿಮಗೆ ಪಿಎಂ ಕಿಸಾನ್ ಯೋಜನೆಯ 16ನೇ ಕಂತು ಜಮೆಯಾಗದಿದ್ದರೆ 155261 ಅಥವಾ 011 2430024300606 ಗೆ ಕರೆ ಮಾಡಿ ವಿಚಾರಿಸಬಹುದು. ಅಥವಾ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ವಿಚಾರಿಸಬಹುದು.

PM kisan Registration ಪಿಎಂ ಕಿಸಾನ್ ಹಣ ಯಾವಾಗ ಜಮೆಯಾಗುತ್ತದೆ ?

ಪಿಎಂ ಕಿಸಾನ್ ಹಣ ಯಾವಾಗ ಜಮೆಯಾಗತ್ತದೆ ಎಂಬ ಪ್ರಶ್ನೆ ಕಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ ಇಲ್ಲಿದೆ. ಹೌದು, ಇದೇ ತಿಂಗಳು ಅಥವಾ  ಫೆಬ್ರವರಿ ಮೊದಲ ವಾರದಲ್ಲಿ ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಜಮೆಯಾಗಲಿದೆ.

By admin

Leave a Reply

Your email address will not be published. Required fields are marked *