Mini job fair

Mini job fair : ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಪಾಸಾದ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ನೀಡಲು ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಹೌದು, ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಜನವರಿ 17 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಆಶೀರ್ವಾದ ಮೈಕ್ರೋ ಫೈನಾನ್ಸ್ದಲ್ಲಿ ಫೀಲ್ಡ್ ಡೆವಲಪ್‌ಮೇಂಟ್ ಆಫೀಸರ್ ಹುದ್ದೆಗೆ ಎಸ್.ಎಸ್.ಎಲ್.ಸಿ /ಪಿಯುಸಿ/ಐಟಿಐ/ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು.

ಟ್ರಾನ್‌ಕಾನ್ ಆಟೋಮೇಷನ್ ಆಂಡ್ ಕನ್ವೇಯರ್ಸ್ದಲ್ಲಿ ಸೇಲ್ಸ್ ಇಂಜಿನಿಯರ್ ಹುದ್ದೆಗೆ ಬಿ.ಇ/ ಬಿ.ಟೆಕ್ / ಡಿಪ್ಲೋಮಾ (ಮೆಕ್ಯಾನಿಕಲ್ ಮಾತ್ರ) ಪಾಸಾಗಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.

Mini job fair ಯಾವ ಯಾವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಲೂಸ್ಮಾರ್ಟ್ ಕ್ಯಾಬ್ (ಇವಿ) ದಲ್ಲಿ ಡ್ರೆವರ್ ಹುದ್ದೆಗೆ ಎಸ್.ಎಸ್.ಎಲ್.ಸಿ./ಪಿಯುಸಿ/ಐಟಿಐ/ ಯಾವುದೇ ಪದವಿ ಪಾಸಾಗಿರಬೇಕು.  ವಯೋಮಿತಿ 21 ರಿಂದ 50 ವರ್ಷದೊಳಗಿರಬೇಕು.

ಸ್ವತಂತ್ರ ಮೈಕ್ರೋ ಫೈನಾನ್ಸ್ದಲ್ಲಿ ಫೀಲ್ಡ್ ಆಫೀಸರ್ ಹುದ್ದೆಗೆ ಪಿಯುಸಿ/ ಐಟಿಐ/ ಡಿಪ್ಲೋಮಾ/ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 27 ವರ್ಷದೊಳಗಿರಬೇಕು. ಬ್ರಾö್ಯಂಚ್ ಮ್ಯಾನೇಜರ್ ಹುದ್ದೆಗೆ ಪಿಯುಸಿ/ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.

ಝೋಮ್ಯಾಟೋದಲ್ಲಿ ಡೆಲಿವರಿ ಎಕ್ಸಿಕ್ಯೊಟಿವ್ ಹುದ್ದೆಗೆ ಎಸ್.ಎಸ್.ಎಲ್.ಸಿ/ಪಿಯುಸಿ/ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 45 ವರ್ಷದೊಳಗಿರಬೇಕು.

ಇದನ್ನೂ ಓದಿ : ಪಿಎಂ ಕಿಸಾನ್ ಯೋಜನೆಗೆ ಹೀಗೆ ನೋಂದಣಿ ಮಾಡಿ

ಕನೆಕ್ಟ್ ಬಿಜಿನೆಸ್ ಸಲ್ಯೂಶನ್‌ದಲ್ಲಿ ವಾಸ್ಸ್ ಆ್ಯಂಡ್ ನಾನ್ ವಾಸ್ಸ್ ಪ್ರೋಸೆಸ್ ಹುದ್ದೆಗೆ ಪಿಯುಸಿ/ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 31 ವರ್ಷದೊಳಗಿರಬೇಕು.

ಮೆಡ್‌ಪ್ಲಸ್‌ದಲ್ಲಿ ಫಾರ್ಮಾಸಿಸ್ಟ್ ಹುದ್ದೆಗೆ ಡಿ/ಬಿ/ಎಮ್ ಫಾರ್ಮಾಸಿ ಪಾಸಾಗಿರಬೇಕು.   ಸಿ.ಎಸ್.ಎ. ಹುದ್ದೆ, ಜ್ಯೂ. ಅಸಿಸ್ಟೆಂಟ್ ಹುದ್ದೆ ಹಾಗೂ ಆಡಿಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ/ಪಿಯುಸಿ/ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.

ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್ (ಬಯೋಡೇಟಾ) ಭಾವಚಿತ್ರಗಳು ಹಾಗೂ ಆಧಾರ್‌ಕಾರ್ಡ್ದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ಮಿನಿ ಉದ್ಯೋಗಮೇಳದಲ್ಲ್ಲಿ ಭಾಗವಹಿಸಬಹುದಾಗಿದೆ.

ನೇರ ಸಂದರ್ಶನದಲ್ಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08472-274846, ಮೊಬೈಲ್ ಸಂಖ್ಯೆ 9620095270 ಗೆ ಸಂಪರ್ಕಿಸಲು ಕೋರಲಾಗಿದೆ.

ಅಂಗನವಾಡಿ ಕಾರ್ಯಕರ್ತೆಯರ ತಾತ್ಕಾಲಿಕ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಚಿಂಚೋಳಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಖಾಲಿ ಚನ್ನೂರ ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ ಹುದ್ದೆಯ ತಾತ್ಕಾಲಿಕವಾಗಿ ಆಯ್ಕೆ ಪಟ್ಟಿಯನ್ನು ಚಿಂಚೋಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಜನವರಿ 7 ರಂದು  ಪ್ರಕಟಿಸಲಾಗಿದೆ ಎಂದು ಚಿಂಚೋಳಿ  ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲಿಚ್ಛಿಸುವವರು 2025ರ ಜನವರಿ 14ರ ಸಂಜೆ 5.30 ಗಂಟೆಯೊಳಗಾಗಿ ಸಂಬಂಧಪಟ್ಟ ದಾಖಲೆಗಳೊಂದಿಗೆ ಚಿಂಚೋಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಆಕ್ಷೇಪಣೆಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಚಿಂಚೋಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಇನ್ನೇಕೆ ತಡ, ಕೂಡಲೇ ನಿಮ್ಮ ಹತ್ತಿರದ ನಿಮ್ಮ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆ ಕಚೇರಿಯಲ್ಲಿ ನಿಮ್ಮ ಹೆಸರಿದೆೆೆಯೇ ಚೆಕ್ ಮಾಡಿಕೊಳ್ಳಿ.

By admin

Leave a Reply

Your email address will not be published. Required fields are marked *