PM kisan Money credit : ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಯಾವಾಗ ಜಮೆಯಾಗುತ್ತದೆ? ಯಾರು ಯಾರಿಗೆ ಜಮೆಯಾಗುತ್ತದೆ ಎಂಬ ಮಾಹಿತಿ ಇಲ್ಲಿದೆ.
ತಮಗೆಲ್ಲಾ ಗೊತ್ತಿದ್ದ ಹಾಗೆ ಪಿಎಂ ಕಿಸಾನ್ ಯೋಜನೆಯ 19 ನೇ ಕಂತಿನಹಣ ಇದೇ ತಿಂಗಳ ಅಂತ್ಯದಲ್ಲಿ ಜಮೆಯಾಗುತ್ತದೆ ಎಂದು ಹೇಳಲಾಗುತ್ತಿದೆ. ಹೌದು, ಅಕ್ಟೋಬರ್ ತಿಂಗಳ ಮೊದಲ ವಾರದಲ್ಲಿ 18 ನೇ ಕಂತಿನ ಹಣ ಜಮೆ ಮಾಡಲಾಗಿತ್ತು. ಹಾಗಾಗಿ ಇದೇ ತಿಂಗಳ ಅಂತ್ಯದಲ್ಲಿ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ಪಿಎಂ ಕಿಸಾನ್ ಯೋಜನೆಯ 19 ನೇ ಕಂತಿನ ಹಣ ಜಮೆ ಮಾಡಲಾಗುವುದು.
PM kisan Money credit ಯಾವ ರೈತರಿಗೆ ಪಿಎಂ ಕಿಸಾನ್ ಹಣ ಜಮೆಯಾಗಿಲಿದೆ?
ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ರೈತರು ಹಾಗೂ ಅರ್ಹತೆ ಪಡೆದ ರೈತರೆಲ್ಲರಿಗೂ ಪಿಎಂ ಕಿಸಾನ್ ಹಣ ಜಮೆಯಾಗಲಿದೆ. ಇದರೊಂದಿಗೆ ಇಕೆವೈಸಿ ಯಾರು ಯಾರು ಮಾಡಿಸಿದ್ದಾರೋ ಆ ರೈತರಿಗೆಲ್ಲರಿಗೂ ಪಿಎಂ ಕಿಸಾನ್ ಹಣ ಜಮೆಯಾಗಲಿದೆ.
PM kisan Money credit ಪಿಎಂ ಕಿಸಾನ್ ಇಕೆವೈಸಿ ಮಾಡಿಸುವುದು ಹೇಗೆ?
ಪಿಎಂ ಕಿಸಾನ್ ಯೋಜನೆಯ ಪೋರ್ಟಲ್ ನಲ್ಲಿ ಆಧಾರ್ ಆಧಾರಿತ ಓಟಿಪಿ ದೃಢೀಕರಣಕ್ಕಾಗಿ ಕಿಸಾನ್ ಕಾರ್ನರ್ ನಲ್ಲಿರುವ ಇ-ಕೆವೈಸಿ ಆಯ್ಕೆಯನ್ನು ಕ್ಲಿಕ್ ಮಾಡಿ ಪ್ರಕ್ರಿಯೆ ಪೂರ್ಣಗೊಳಿಸಬಹುದು. ರೈತರು ಈ
https://pmkisan.gov.in/aadharekyc.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಅಲ್ಲಿ ಪಿಎಂ ಕಿಸಾನ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು ನಿಮ್ಮಆಧಾರ್ ಕಾರ್ಡ್ ನ್ನು ನಮೂದಿಸೇಕು. ನಂತರ search ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ಹೆಸರಿಗೆ ಇಕೆವೈಸಿ ಆಗಿದ್ದರೆ ಅಲ್ಲಿ EKYC is Already Done ಎಂಬ ಮೆಸೇಜ್ ಕಾಣಿಸುತ್ತದೆ. ಅಲ್ಲಿ ನೀವು ಓಕೆ ಬಟನ್ ಮೇಲೆ ಕ್ಲಿಕ್ ಮಾಡಬಹುದು.
ಪಿಎಂ ಕಿಸಾನ್ ಯೋಜನೆಯ ಹಣ ಪಡೆಯಲು ಬೇಕಾಗುವ ಅರ್ಹತೆಗಳು ಯಾವುವು?
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿದ್ದ ಮಾತ್ರಕ್ಕೆ ನಿಮಗೆ ಮುಂದಿನ ಕಂತು ಜಮೆಯಾಗುತ್ತದೆ ಎಂದು ಹೇಳಲಿಕ್ಕಾಗುವುದಿಲ್ಲ. ಪಿಎಂ ಕಿಸಾನ್ ಯೋಜನೆಗೆ ಅರ್ಹತೆ ಇರಬೇಕು. ಹೌದು, ನೀವು ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು. ನೀವು ನಿಮ್ಮ ಪತಿ ಅಥವಾ ಪತ್ನಿ ಅಥವಾ ಮಕ್ಕಳು ಸರ್ಕಾರಿ ನೌಕರಿಯಲ್ಲಿರಬಾರದು.
ಇದನ್ನೂ ಓದಿ : ಭೂ ಸುರಕ್ಷಾ ಯೋಜನೆ ಒಂದೇ ನಿಮಿಷದಲ್ಲಿ ಭೂ ದಾಖಲೆ ಸಿಗಲಿದೆ
ಒಂದು ವೇಳೆ ನಿಮ್ಮ ಕುಟುಂಬದಲ್ಲಿ ಸರ್ಕಾರಿ ನೌಕರರು ಯಾರಾದರೂ ಇದ್ದರೆ ನಿಮಗೆ ಯೋಜನೆಯ ಹಣ ಜಮೆಯಾಗುವುದಿಲ್ಲ. ಇದರೊಂದಿಗೆ ನಿಮ್ಮ ಕುಟುಂಬದಲ್ಲಿ ಪಿಂಚಣಿ ಪಡೆಯುವವರಿದ್ದರೂ ಸಹ ಹಣ ಜಮೆಯಾಗುವುದಿಲ್ಲ.
ಪಿಎಂ ಕಿಸಾನ್ ಈ ಪಟ್ಟಿಯಲ್ಲಿರುವ ರೈತರಿಗೆ ಹಣ ಜಮೆ
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಹೆಸರು ಕೆಳಗಡೆ ನೀಡಲಾದ ಪಟ್ಟಿಯಲ್ಲಿದ್ದರೆ ಮಾತ್ರ ಜಮಯಾಗಲಿದೆ. ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಚೆಕ್ ಮಾಡಲು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿಗೆ ಫಲಾನುಭವಿಗಳ ಚೆಕ್ ಮಾಡುವ ಪೇಜ್ ಓಪನ್ ಆಗುತ್ತದೆ.
ಅಲ್ಲಿ ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಬ್ಲಾಕ್ ನಲ್ಲಿ ನಿಮ್ಮ ತಾಲೂಕು ಆಯ್ಕೆ ಮಾಡಿಕೊಂಡು ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ Get Report ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮೂರಿನಲ್ಲಿ ಯಾವ ಯಾವ ರೈತರು ಫಲಾನುಭವಿಗಳಿದ್ದಾರೆ ಎಂಬ ಪಟ್ಟಿ ಕಾಣಿಸುತ್ತದೆ. ಎ ದಿಂದ ಹೆಸರು ಆರಂಭವಾಗುತ್ತದೆ. ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದರ ಪ್ರಕಾರ ಕೆಳಗೆ ನೀಡಲಾದ ಮುಂದಿನ ಪೇಜ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಹೆಸರನ್ನು ಸುಲಭವಾಗಿ ಚೆಕ್ ಮಾಡಬಹುದು.