Vehicle purchase Subsidy: ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಶಾಖಾ ನಿರೋಧಕ ವಾಹನ ಖರೀದಿಗೆ ಹಾಗೂ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರೈತರಿಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಕಲಬುರಗಿ ಮೀನುಗಾರಿಕೆ ಇಲಾಖೆಯಿಂದ 2024-25 ನೇ ಸಾಲಿಗೆ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನ ನೀಡಲು ಆಸಕ್ತಿಯುಳ್ಳ ಒಳನಾಡು ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮೀನುಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
Vehicle purchase Subsidy ಈ ಯೋಜನೆಯಡಿ ಇನ್ಸುಲೇಟಡ್ ವಹಿಕಲ್ (ಶಾಖಾ ನಿರೋಧಕ ವಾಹನ) (ಮಹಿಳಾ ವರ್ಗ) ಹಾಗೂ ಸಗಟು ಮೀನು ಮಾರುಕಟ್ಟೆ ಸ್ಥಾಪನೆ (ಮಹಿಳಾ ವರ್ಗ) ಸಹಾಯಧನ ಪಡೆಯಬಹುದಾಗಿದೆ. ಆಸಕ್ತರು ಸಂಬಂಧಪಟ್ಟ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ 2025 ರ ಜನವರಿ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಕಲಬುರಗಿ/ ಚಿಂಚೋಳಿ ಕಚೇರಿಯನ್ನು ಹಾಗೂ ಮೊಬೈಲ್ ಸಂಖ್ಯೆ: 8660789342/ 9901020772 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರೈತರಿಗೆ ತರಬೇತಿ: ಹೆಸರು ನೋಂದಣಿಗೆ ಸೂಚನೆ
ಕಲಬುರಗಿ,ಜ.20(ಕ.ವಾ.)-ಪ್ರಸಕ್ತ 2024-25 ನೇ ಸಾಲಿನಲ್ಲಿ ಸೂಕ್ಷ್ಮ ನೀರಾವರಿ ಕಾರ್ಯಕ್ರಮದ ಯೋಜನೆಯಾದ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತುಂತುರು ಮತ್ತು ಹನಿ ನೀರಾವರಿ ಪದ್ಧತಿ ಅಳವಡಿಕೆಯಿಂದ ಆಗುವ ಉಪಯೋಗಗಳು ಮತ್ತು ಅವುಗಳ ನಿರ್ವಹಣೆ ಕುರಿತು ಇದೇ ಜನವರಿ 27 ರಿಂದ 29 ರವರೆಗೆ ಮೂರು ದಿನಗಳ ತರಬೇತಿ ಕೋಟನೂರ(ಡಿ) ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ತರಬೇತಿಯನ್ನು ಆಯೋಜಿಸಲಾಗಿದೆ ಎಂದು ಕೋಟನೂರ(ಡಿ) ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಮುಖ್ಯಸ್ಥರು ತಿಳಿಸಿದ್ದಾರೆ.
ಇದನ್ನೂ ಓದಿ : ಪಿಎಂ ಕಿಸಾನ್ ಹಣ ಯಾವಾಗ ಜಮೆ? ಇಲ್ಲಿದೆ ಮಾಹಿತಿ
ತರಬೇತಿ ಪಡೆಯಲು ಆಸಕ್ತಿವುಳ್ಳ ಎಫ್‌ಐಡಿ (FID) ಹೊಂದಿರುವ ರೈತರು ಮತ್ತು ರೈತ ಸಂಪರ್ಕ ಕೇಂದ್ರಗಳಿಂದ ತುಂತುರು ಮತ್ತು ಹನಿ ನೀರಾವರಿ ಘಟಕಗಳನ್ನು ಪಡೆದ ರೈತರು ಕೃಷಿ ಅಧಿಕಾರಿಗಳಾದ ಸುಜಾತಾ.ಆರ್.ರಾಜನಾಳಕರ ಇವರ ಮೊಬೈಲ್ ಸಂಖ್ಯೆ 9448651201 ಹಾಗೂ ಯಾಸ್ಮಿನ್ ಇವರ ಮೊಬೈಲ್ ಸಂಖ್ಯೆ 9901604822 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಈ ಹಿಂದೆ ಸೂಕ್ಷ್ಮ ನೀರಾವರಿ ಕಾರ್ಯಕ್ರಮದ ಯೋಜನೆಯಡಿ ತರಬೇತಿ ಪಡೆದ ರೈತರನ್ನು ಪರಿಗಣಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಚಾಮರಾಜನಗರ ಜಿಲ್ಲೆಯಲ್ಲಿ 2024-25 ನೇ ಸಾಲಿನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳನ್ನು ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಅರ್ಹತೆಗಳು, ಇತರೆ ವಿವರಗಳನ್ನು ತಿಳಿದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ. ಈ ಹುದ್ದೆಗಳಿಗೆ ಅರ್ಜಿ ಹಾಕಿದವರಿಗೆ ಯಾವುದೇ ಪರೀಕ್ಷೆ ಇರುವುದಿಲ್ಲ. ಬದಲಾಗಿ ವಿದ್ಯಾರ್ಹತೆ ಅಂಕಗಳು, ಅಂಗನವಾಡಿ ಹತ್ತಿರದ ಗ್ರಾಮ, ಸಂದರ್ಶನದಲ್ಲಿ ತೋರಿದ ಕಾರ್ಯಕ್ಷಮತೆ, ಮೀಸಲಾತಿ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.
2024-25 ನೇ ಸಾಲಿನಲ್ಲಿ ಚಾಮರಾಜನಗರ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯಡಿ 11 ಅಂಗನವಾಡಿ ಕಾರ್ಯಕರ್ತೆ, 23 ಸಹಾಯಕಿಯರ ಹುದ್ದೆ, ಗುಂಡ್ಲುಪೇಟೆ ತಾಲೂಕಿನಲ್ಲಿ 18 ಅಂಗನವಾಡಿ ಕಾರ್ಯಕರ್ತೆ, 45 ಸಹಾಯಕಿಯರ ಹುದ್ದೆ, ಕೊಳ್ಳೇಗಾಲ ತಾಲೂಕಿನಲ್ಲಿ 14 ಅಂಗನವಾಡಿ ಕಾರ್ಯಕರ್ತೆ, 23 ಸಹಾಯಕಿಯರ ಹುದ್ದೆ, ಸಂತೇಮರಹಳ್ಳಿಯಲ್ಲಿ 8 ಅಂಗನವಾಡಿ ಕಾರ್ಯಕರ್ತೆ, 19 ಸಹಾಯಕಿಯರ ಹುದ್ದೆ, ಹನೂರು ತಾಲೂಕಿನಲ್ಲಿ 22 ಅಂಗನವಾಡಿ ಕಾರ್ಯಕರ್ತೆ, 24 ಸಹಾಯಕಿಯರ ಹುದ್ದೆ ಹಾಗೂ ಯಳಂದೂರು ತಾಲೂಕಿನಲ್ಲಿ 4 ಅಂಗನವಾಡಿ ಕಾರ್ಯಕರ್ತೆ, 8 ಸಹಾಯಕಿಯರ ಹುದ್ದೆ ಸೇರಿದಂತೆ ಒಟ್ಟು 219 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ಆಸಕ್ತ ಮಹಿಳೆಯರು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಫೆಬ್ರವರಿ 7 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.