rain alert today

rain alert today : ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧೆಡೆ ಒಂದುವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

rain alert today  ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ಹೌದು, ಕಲಬುರಗಿ, ಬೀದರ್, ಯಾದಗಿರಿ, ಧಾರವಾಡ, ಬೆಳಗಾವಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ,  ಹಾವೇರಿ, ಹಾಸನ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಲಬುರಗಿ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾನುವಾರ ಮುಂದಿನ ಮೂರು ಗಂಟೆಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಂಧ್ರಪ್ರದೇಶದ ಕರಾವಳಿ ಭಾಗದ ಮಧ್ಯ ಭಾಗಗಳು, ಯಾಣಂ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಾಯು ಚಂಡಮಾರುತ ಇರುವುದರಿಂದ ಕರ್ನಾಟದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ ಈ ಮಹಿಳೆಯರ ಖಾತೆಗೆ ಜಮೆಯಾಯಿತು ಗೃಹಲಕ್ಷ್ಮೀ ಹಣ 2025

ದಕ್ಷಿಣಕನ್ನಡ, ಉಡುಪಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಚಿಕ್ಕಮಗಳೂರು, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ಕೋಲಾರ, ಮಂಡ್ಯ ಕೊಡಗು, ಹಾಸನ, ಮತ್ತು ಶಿವಮೊಗ್ಗ, ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಏಪ್ರೀಲ್ 15, 16 ಹಾಗೂ 17 ರಂದು ಸಹ ವಿವಿಧ ಜಿಲ್ಲೆಗಳಲ್ಲಿ ಅಲ್ಲಲ್ಲಿಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

rain alert today ವರುಣಮಿತ್ರ ಸಹಾಯವಾಣಿ ಈ ನಂಬರಿಗೆ ಕರೆ ಮಾಡಿ

ಇಂದು ಯಾವ ಯಾವ ಊರಿನಲ್ಲಿ ಮಳೆಯಾಗುತ್ತದೆ ಎಂಬುದನ್ನು ತಿಳಿದುಕೊಳ್ಳಲು ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಬೇಕು. ಹೌದು, ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ಸಿಗುತ್ತದೆ. ಈ ನಂಬರ್  ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ.  ನೀವು ಇದ್ದ ಊರಿನಲ್ಲಿಯೂ ಮುಂದಿನ ಐದು ದಿನದ ಹವಾಮಾನದ ವರದಿಯನ್ನು ನೀಡಲಾಗುವುದು. ಇದಕ್ಕಾಗಿ ರೈತರು ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಸಂಪೂರ್ಣ ಉಚಿತವಾಗಿರುತ್ತದೆ.

ಇನ್ನೇಕೆ ತಡ ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿ  ನಿಮ್ಮೂರಿನ ಸುತ್ತಮುತ್ತ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿ ಪಡೆಯಿರಿ.

rain alert today  ಮೇಘದೂತ್ ಆ್ಯಪ್ ಡೌನ್ಲೋಡ್ ಮಾಡಿ  ಐದು ದಿನ ಮೊದಲೇ ಮಳೆಯ ಮಾಹಿತಿ ಪಡೆಯುವುದು ಹೇಗೆ?

ರೈತರು ಮನೆಯಲ್ಲಿಯೇ ಕುಳಿತು ಐದು ದಿನ ಮೊದಲೇ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬಹುದು. ಹೌದು,  ಈ

https://play.google.com/store/apps/details?id=com.aas.meghdoot&hl=en_IN&gl=US

ಲಿಂಕ್ ಮೇಲ ಕ್ಲಿಕ್ ಮಾಡಿ ಮೇಘದೂತ್ ಆ್ಯಪ್ ಇನಸ್ಟಾಲ್ ಮಾಡಿಕೊಳ್ಳಬಹುದು. ನಂತರ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿ ಓಪನ್ ಮೇಲೆ ಕ್ಲಿಕ್ ಮಾಡಬೇಕು. ನೀವು ಯಾವ ಭಾಷೆಯಲ್ಲಿ ಮಾಹಿತಿ ಚೆಕ್ ಮಾಡಬೇಕೆಂದುಕೊಂಡಿದ್ದೀರೋ ಆ ಭಾಷೆ ಆಯ್ಕೆ ಮಾಡಿಕೊಳ್ಳಬೇಕು, ನಂತರ ಮುಂದೆ ಮೇಲೆ ಕ್ಲಿಕ್ ಮೇಘದೂತ್ ಆ್ಯಪ್ ಲಾಗಿನ್ ಆಗಬೇಕು. ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಲಾಗಿನ್ ಆಗಬೇಕು. ನಂತರ ವೈಲ್ ಯೂಸಿಂಗ್ ದ ಆ್ಯಪ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಜಿಲ್ಲೆಯ ಕನಿಷ್ಠ, ಗರಿಷ್ಠ ತಾಪಮಾನ, ಗಾಳಿಯ ವೇಗ ಹಾಗೂ ಗಾಳಿಯ ದಿಕ್ಕು ತೇವಾಂಶದ ಮಾಹಿತಿ ಕಾಣಿಸುತ್ತದೆ.

 

 

By admin

Leave a Reply

Your email address will not be published. Required fields are marked *