Anganawadi teacher job : ಬೆಳಗಾವಿ ಜಿಲ್ಲೆಯಾದ್ಯಂತ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಾಗಾದರೆ ಯಾರು ಯಾರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು, ಎಲ್ಲಿ ಅರ್ಜಿಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಮಾಹಿತಿಯನ್ನು ಇಲ್ಲಿನೀಡಲಾಗಿದೆ.
ಬೆಳಗಾವಿ ಜಿಲ್ಲೆಯಾದ್ಯಂತ 558 ಅಂಗನವಾಡಿಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಎಸ್ಎಸ್ಎಲ್ಸಿ, ಪಿಯುಸಿ, ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ಪಡೆದಿರುವವರು ಅರ್ಜಿ ಸಲ್ಲಿಸಬಹುದು. ಬೆಳಗಾವಿ ಜಿಲ್ಲೆಗೆ ಬರೋಬರಿ 558 ಅಂಗನವಾಡಿ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿದೆ.
Anganawadi teacher job ಅರ್ಜಿ ಸಲ್ಲಿಸಲು ಬೇಕಾಗುವ ವಯೋಮಿತಿ
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಯಾವುದೇ ಹುದ್ದೆಗೆ ಅರ್ಜಿ ಹಾಕಲು ಕನಿಷ್ಠ 19 ವರ್ಷ ತುಂಬಿರಬೇಕು. 35 ವರ್ಷ ವಯಸ್ಸು ಮೀರಿರಬಾರದು.
ಇತರೆ ಹಿಂದುಳಿದ ವರ್ಗದವರಿಗೆ 3 ವರ್ಷ, ಎಸ್ಸಿ/ ಎಸ್ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಅನ್ವಯವಾಗಲಿವೆ.
Anganawadi teacher job ಆನ್ಲೈನ್ ಮೂಲಕ ಅರ್ಜಿಸಲ್ಲಿಸಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ
https://karnemakaone.kar.nic.in/abcd/home.aspx
ಲಿಂಕ್ ಮೇಲೆ ಕ್ಲಿಕ್ ಮಾಡಿ. ನಂತರ ನಿಮ್ಮಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಅಂದರೆ ಬೆಳಗಾವಿ ಜಿಲ್ಲೆಗೆ ಅರ್ಜಿ ಆಹ್ವಾನಿಸಲಾಗಿದ್ದರಿಂದ ಬೆಳಗಾವಿ ಎಂದು ಆಯ್ಕೆ ಮಾಡಿಕೊಳ್ಳಬೇಕು. ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಆರ್ಡಿ ಸಂಖ್ಯೆ ನೀಡಬೇಕು.
ಇದನ್ನೂ ಓದಿ ಮೀನುಮರಿ ಪಾಲನೆಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ
ಆಸಕ್ತ ತಾಲ್ಲೂಕಿನಲ್ಲಿ ನಿಮ್ಮ ವರ್ಗಕ್ಕೆ ಹುದ್ದೆ ಇದ್ದರೆ, ಅರ್ಜಿ ಮುಂದುವರೆಸಬಹುದು. ನಂತರ ಅರ್ಜಿ ಸಲ್ಲಿಸಲು ಬಯಸುವ ಅಂಗನವಾಡಿ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬೇಕು. ಅಗತ್ಯ ದಾಖಲೆಗಳನ್ನು ಆಯಾ ಹೆಸರಿನ ಮುಂದೆ ಇರುವ ಆಯ್ಕೆ ಬಟನ್ ಕ್ಲಿಕ್ ಮಾಡಿ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
Anganawadi teacher job ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಹಾಕಲು ಬೇಕಾದ ಅಗತ್ಯ ದಾಖಲೆಗಳು
ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್ಎಸ್ಎಲ್ಸಿ / ಪಿಯುಸಿ ಅಂಕಪಟ್ಟಿ.
ವೈಯಕ್ತಿಕ ಕೆಲವು ವಿವರಗಳು
ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ.
ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ.
ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.
ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ.
ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ.
ವಾಸಸ್ಥಳ ದೃಢೀಕರಣ ಪತ್ರ ಸಲ್ಲಿಸಬೇಕು.