farm machinery equipment subsidy: ರೈತರಿಗೆ ಕೃಷಿ ಯಂತ್ರೋಪಕರಣಗಳ ಖರೀದಿಗೆ ಸಬ್ಸಿಡಿ ನೀಡಲಾಗುವುದು. ಹೌದು, ಬಹುತೇಕ ರೈತರಿಗೆ ಯಾವ ಯಾವ ಕೃಷಿ ಯಂತ್ರೋಪಕರಣಗಳ ಖರೀದಿಗೆ ಸಬ್ಸಿಡಿ ನೀಡಲಾಗುವುದು ಎಂಬ ಮಾಹಿತಿ ಕೊರತೆಯಿದೆ.
ರೈತರಿಗೆ ಸಂಪೂರ್ಣ ಮಾಹಿತಿ ಮೊಬೈಲ್ನಲ್ಲೇ ನೀಡುವುದಕ್ಕಾಗಿ ಈ ಲೇಖನ ಬರೆಯಲಾಗುತ್ತಿದೆ. ರೈತರಿಗೆ ಉಳುಮೆಯಿಂದ ಹಿಡಿದು ಬೆಳೆ ಕಟಾವು ಮಾಡುವವರಿಗೆ ವಿವಿಧ ಪ್ರಕಾರದ ಯಂತ್ರೋಪಕರಣಗಳನ್ನು ಸಬ್ಸಿಡಿ ನೀಡಲಾಗುವುದು. ಯಾವ ಯಾವ ಕೃಷಿ ಯಂತ್ರೋಪಕರಣಗಳನ್ನು ಸಬ್ಸಿಡಿಯಲ್ಲಿ ನೀಡಲಾಗುವುದು ಎಂಬ ಮಾಹಿತಿ ಇಲ್ಲಿದೆ.
ಸರ್ಕಾರವು ಕೃಷಿ ಕೂಲಿ ಕಾರ್ಮಿಕರ ಮೇಲಿನ ಅವಲಂಬನೆ ಕಡಿಮೆ ಮಾಡುವುದಕ್ಕಾಗಿ ಕೃಷಿ ಯಾಂತ್ರೀಕರಣ ಯೋಜನೆಯನ್ನು ಜಾರಿಗೆ ತಂದಿದೆ.
ಇತ್ತೀಚೆಗೆ ಕೃಷಿಯಲ್ಲಿಯೂ ಆಧುನಿಕ ತಂತ್ರಜ್ಞಾನಗಳ ಬಳಕೆ ಹೆಚ್ಚಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಕೃಷಿ ಯಂತ್ರೋಪಕರಣಗಳ ಬಳಕೆ ಕಡಿಮೆಯಾಗುತ್ತಿದ್ದರಿಂದ ಸರ್ಕಾರವು ರೈತರಿಗೆ ನೆರವು ನೀಡಲು ಕೃಷಿ ಯಾಂತ್ರೀಕರಣ ಯೋಜನೆಯನ್ನು ಜಾರಿಗೆ ತಂದಿದೆ.
farm machinery equipment subsidy ಯಾವ ಯಾವ ಉಪಕರಣಗಳಿಗೆ ಸಹಾಯಧನ ಸಿಗುವುದು?
ಕೃಷಿ ಯಾಂತ್ರೀಕರಣ ಯೋಜನೆಯಡಿಯಲ್ಲಿ ರೈತರಿಗೆ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟಾವೇಟರ್, ಎಂ.ಬಿ. ಪ್ಲೋ, ಡಿಸ್ಕ್ ಪ್ಲೋ ಸೇರಿದಂತೆ ಇನ್ನಿತರ ಕೃಷಿ ಯಂತ್ರೋಪಕರಣಗಳನ್ನು ಸಹಾಯಧನ ನೀಡಲಾಗುವುದು.
ಯಾವ ಉಪಕರಣಕ್ಕೆ ಎಷ್ಟು ಸಹಾಯಧನ ಸಿಗುವುದು?
ಕೃಷಿ ಯಾಂತ್ರೀಕರಣ ಯೋಜನೆಯಡಿಯಲ್ಲಿ ರೈತರಿಗೆ ಮಿನಿ ಟ್ರ್ಯಾಕ್ಟರ್ ಖರೀದಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಗರಿಷ್ಠ 3 ಲಕ್ಷ ರೂಪಾಯಿಯವರೆಗೆ ಸಹಾಯಧನ ಸಿಗುವುದು.
ಇದನ್ನೂ ಓದಿ : ಪಿಎಂ ಕಿಸಾನ್ ಯೋಜನೆಗೆ ಹೀಗೆ ನೋಂದಣಿ ಮಾಡಿ
ಅದೇ ರೀತಿ ಸಾಮಾನ್ಯವರ್ಗದ ರೈತರಿಗೆ 75 ಸಾವಿರ ರೂಪಾಯಿ ಸಹಾಯಧನ ನೀಡಲಾಗುವುದು.
ಪವರ್ ಟಿಲ್ಲರ್ ಖರೀದಿಗೆ ಎಷ್ಟು ಸಹಾಯಧನ ನೀಡಲಾಗುವುದು?
ಪವರ್ ಟಿಲ್ಲರ್ ಖರೀದಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ. 90 ರವರೆಗೆ ಸಹಾಯಧನ ನೀಡಲಾಗುವುದು. ಇತರ ವರ್ಗದ ರೈತರಿಗೆ ಶೇ. 50 ರಷ್ಟು ಸಹಾಯಧನ ನೀಡಲಾಗುವುದು.
ಅದೇ ರೀತಿ ಟ್ರ್ಯಾಕ್ಟರ್ ಚಾಲಿತ ಡಿಸ್ಕ್ ಪ್ಲೋ, ಟ್ರ್ಯಾಕ್ಟರ್ ಚಾಲಿತ ಡಿಸ್ಕ್ ಹ್ಯಾರೋ ಉಪಕರಣಗಳಿಗೂ ಸಹಾಯಧನ ನೀಡಲಾಗುವುದು.
ರೈತರು ಸಹಾಯಧನ ಪಡೆಯಲು ಯಾವ ಯಾವ ದಾಖಲೆ ಸಲ್ಲಿಸಬೇಕು?
ಕೃಷಿ ಯಾಂತ್ರೀಕರಣ ಯೋಜನೆಯಡಿಯಲ್ಲಿ ಸಹಾಯಧನ ಪಡೆಯಲು ರೈತರ ಬಳಿ ಆಧಾರ್ ಕಾರ್ಡ್ ಇರಬೇಕು. ರೈತರು ಸಾಗುವಳಿ ಮಾಡುತ್ತಿರುವ ಜಮೀನಿನ ಪಹಣಿ (ಆರ್.ಟಿ.ಸಿ) ದಾಖಲೆ ಹೊಂದಿರಬೇಕು. ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಪ್ರತಿ ಇರಬೇಕು. ರೈತರು ಫ್ರೂಟ್ಸ್ ಐಡಿ ಹೊಂದುವುದು ಕಡ್ಡಾಯವಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ಬಳಿ ಆರ್.ಡಿ. ಸಂಖ್ಯೆ ಹೊಂದಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇರಬೇಕು.
ಅರ್ಜಿ ಎಲ್ಲಿ ಸಲ್ಲಿಸಬೇಕು?
ಕೃಷಿ ಇಲಾಖೆ ಅಥವಾ ತೋಟಗಾರಿಕೆ ಇಲಾಖೆಯ ವತಿಯಿಂದ ಲಭ್ಯತೆಯ ಆಧಾರದ ಮೇಲೆ ಕೃಷಿ ಯಂತ್ರೋಪಕರಣಗಳ ಖರೀದಿಗೆ ಸಹಾಯಧನ ನೀಡಲು ಜಿಲ್ಲಾವಾರು ಅರ್ಜಿ ಆಹ್ವಾನಿಸಲಾಗುವುದು.
ಅರ್ಜಿ ಆಹ್ವಾನಿಸಿದಾಗ ರೈತರು ತಮಗೆ ಬೇಕಾದ ಕೃಷಿ ಯಂತ್ರೋಪಕರಣಕ್ಕೆ ಅರ್ಜಿ ಸಲ್ಲಿಸಬೇಕು. ಆಗ ಹಿರಿತನದ ಆಧಾರದ ಮೇಲೆ ಮೊದಲು ಅರ್ಜಿ ಸಲ್ಲಿಸಿದವರಿಗೆ ಆದ್ಯತೆ ನೀಡಲಾಗುವುದು. ಈ ಹಿಂದೆ ಕೃಷಿ ಯಾಂತ್ರೀಕರಣ ಯೋಜನೆಯಡಿ ಸೌಲಭ್ಯ ಪಡೆಯದ ರೈತರಿಗೆ ಉಪಕರಣ ನೀಡಲಾಗುವುದು. ಹಾಗಾಗಿ ರೈತರು ಅರ್ಜಿ ಆಹ್ವಾನಿಸಿದಾಗ ಅರ್ಜಿ ಸಲ್ಲಿಸಿ ತಮಗೆ ಬೇಕಾದ ಕೃಷಿ ಯಂತ್ರೋಪಕರಣಗಳ ಖರೀದಿಗೆ ಸಹಾಯಧನ ಪಡೆಯಬಹುದು.
ಹೆಚ್ಚಿನ ಮಾಹಿತಿಗೆ ರೈತರು ತಮ್ಮ ಹತ್ತಿರದಲ್ಲಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಬಹುದು.