Fish pond subsidy ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ 2024-25ನೇ ಸಾಲಿ ಪೂರ್ವದ ಬಾಕಿ ಉಳಿದ ಗುರಿ ಹಾಗೂ ಹೊಸ ಗುರಿ ಅನುಷ್ಠಾನಗೊಳಿಸಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮೀನುಗಾರಿಕೆ ಉಪ ನಿರ್ದೇಶಕರು ತಿಳಿಸಿದ್ದಾರೆ.
Fish pond subsidy ಯಾವು ಯಾವುದಕ್ಕೆ ಸಬ್ಸಿಡಿ ನೀಡಲಾಗುವುದು?
ಯಾದಗಿರಿ ಜಿಲ್ಲೆಯ ಮೀನುಗಾರರು, ಮೀನು ಕೃಷಿಕರು ಮತ್ತು ಸಾರ್ವಜನಿಕರಿಗೆ ಗಮನಕ್ಕೆ ಮೀನುಗಾರಿಕೆ ಇಲಾಖೆಯಿಂದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಅಡಿ ಜಿಲ್ಲೆಗೆ ನೀಡಿರುವ ಗುರಿಗಳು ಬಾಕಿ ಉಳಿದಿವೆ. ಮೀನು ಕೃಷಿ ಕೊಳ ನಿರ್ಮಾಣ, ಮೀನುಮರಿ ಪಾಲನಾ ಕೊಳ ನಿರ್ಮಾಣ, ಕ್ಷಾರ, ಲವಣಯುಕ್ತ ಜಮೀನಿನಲ್ಲಿ ಮೀನು ಕೃಷಿಕೊಳ, ಹೂಡಿಕೆ ವೆಚ್ಚಗಳಿಗೆ ಸಹಾಯಧನ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?
ಮೇ 12 ರ ಒಳಗೆ ಅರ್ಜಿ ಸಲ್ಲಿಸಬೇಕು.ಅರ್ಹ, ಆಸಕ್ತ ಫಲಾನುಭವಿ ದಾಖಲೆಗಳೊಂದಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು ಯಾದಗಿರಿ, ಶಹಾಪೂರ, ಸುರಪುರ ಕಚೇರಿಗಳಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ಯಾದಗಿರಿ, ಶಹಾಪುರ, ಸುರಪುರ, ಹಾಗೂ ಮೀನುಗಾರಿಕೆ ಉಪ ನಿರ್ದೇಶಕರು ಯಾದಗಿರಿ ಜಿಲ್ಲೆ ಯ ಕಚೇರಿಯ ವೇಳೆಯಲ್ಲಿಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ರೈತರಿಗೆ 667 ಕೋಟಿ ಪರಿಹಾರ ಮಂಜೂರು – ಪ್ರಿಯಾಂಕ್ ಖರ್ಗೆ
: ಮುಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರಿಗೆ ಗುಡ್ ನ್ಯೂಸ್ ಇಲ್ಲಿದೆ. ಹೌದು, ಬೆಳೆ ವಿಮೆ ಮಾಡಿಸಿದ ರೈತರ ಖಾತೆಗೆ 575.194 ಕೋಟಿ ರೂಪಾಯಿ ಬೆಳೆ ವಿಮೆ ಪರಿಹಾರ ಮಂಜೂರಾಗಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ತೊಗರಿ, ಹೆಸರು, ಉದ್ದು, ಸೋಯಾಬೀನ್ ಹತ್ತಿ ಹಾಗೂ ಇತರೆ ಬೆಳೆಗಳನ್ನು ಬೆಳೆದಿದ್ದ ಕಲಬುರಗಿ ಜಿಲ್ಲೆಯ 2,04,073 ರೈತರು ಬೆಳೆ ವಿಮೆ ಯೋಜನೆಯಡಿ ವಿಮೆ ಪರಿಹಾರ ಕೋರಿ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ನೋಂದಾವಣೆ ಮಾಡಿಕೊಂಡಿದ್ದು 575.194 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರಾಗಿದೆ.
ಇದನ್ನೂ ಓದಿ ಉಚಿತವಾಗಿ ಮನೆ ನಿರ್ಮಿಸಲು ಅರ್ಜಿ ಆಹ್ವಾನ
ಕಲಬುರಗಿ ಜಿಲ್ಲೆಯಲ್ಲಿ ಬೆಳೆ ವಿಮೆ ಹಾಗೂ ಬೆಳೆಹಾನಿ ಸೇರಿದಂತೆ 2,36,933 ರೈತರಿಗೆ ಒಟ್ಟು ರೂಪಾಯಿ 667.73 ಕೋಟಿ ರೂಪಾಯಿ ಪರಿಹಾರ ನೀಡಲಾಗುತ್ತಿದೆ, ರಾಜ್ಯ ಸರ್ಕಾರದಿಂದ ಜಿಲ್ಲೆಯ ರೈತರಿಗೆ ಇಷ್ಟು ದೊಡ್ಡ ಮೊತ್ತದ ಬೆಳೆ ವಿಮೆ ಪರಿಹಾರ ನೀಡುವ ಮೂಲಕ ದಾಖಲೆ ಸೃಷ್ಟಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಯಾವ ಯಾವ ಬೆಳೆಗೆ ಹಣ ಮಂಜೂರು?
ಜಿಲ್ಲೆಯಲ್ಲಿ 4.36 ಲಕ್ಷ ರೈತರು ತೊಗರಿ, ಹೆಸರು, ಉದ್ದು, ಸೋಯಾಬೀನ್ ಹತ್ತಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ, ಈ ಪೈಕಿ ಸ್ಥಳೀಯ ಪ್ರಕೃತಿ ವಿಕೋಪದಡಿ ದೂರುಗಳನ್ನು ಸಲ್ಲಿಸಿದ 2,01,847 ರೈತರಿಗೆ ಮಧ್ಯಂತರ ಪರಿಹಾರವಾಗಿ ರೂಪಾಯಿ 76.34 ಕೋಟಿ ಪರಿಹಾರ ಈಗಾಗಲೆ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ರೈತವಾರು ಮಾಹಿತಿಯನ್ನು ಸಂರಕ್ಷಣಾ ಪೋರ್ಟನಲ್ಲಿ ದಾಖಲಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲೀಯೇ ಬೆಳೆ ವಿಮೆ ಪರಿಹಾರ ರೈತರ ಖಾತೆಗೆ ನೇರವಾಗಿ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಜಿಲ್ಲೆಯ ರೈತರು ಬೆಳೆಯುತ್ತಿರುವ ತೊಗರಿಗೆ ಕ್ವಿಂಟಾಲ್ ಒಂದಕ್ಕೆ 7550 ರೂಪಾಯಿ ಬೆಂಬಲ ಬಲೆ ನಿಗದಿ ಮಾಡಿದ್ದು, ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್ಗೆ 450 ರೂಪಾಯಿ ಪ್ರೋತ್ಸಾಹಧನವನ್ನು ನಿಗದಿ ಮಾಡಿದೆ. ಜಿಲ್ಲೆಯ 9189 ರೈತರಿಗೆ 108.30 ಕೋಟಿ ರೂಪಾಯಿ ಸಹಾಯಧನವನ್ನು ವಿತರಿಸಲಾಗಿದೆ ಎಂದೂ ಸಚಿವರು ತಿಳಿಸಿದ್ದಾರೆ.
2024-25 ನೇ ಸಾಲಿನಲ್ಲಿ ಅಗಷ್ಟ್ ಕೊನೆಯ ವಾರ ಹಾಗೂ ಸೆಪ್ಟಂಬರ್ ತಿಂಗಳ ಮೊದಲನೆ ವಾರದಲ್ಲಿ ಸುರಿದ ಹೆಚ್ಚಿನ ಮಳೆಯಿಂದಾಗಿ ಒಟ್ಟು 16373 ಹೆಕ್ಟೇರ್ನಷ್ಟು ಬೆಳೆ ಹಾನಿಯಾಗಿದ್ದು, ರಾಷ್ಟ್ರೀಯ ಹಾಗೂ ರಾಜ್ಯ ಬರ ಪರಿಹಾರ ನಿಧಿ ಮಾರ್ಗಸೂಚಿಯಂತೆ 35,086 ರೈತರಿಗೆ 13.47 ಕೋಟಿ ರೂಪಾಯಿ ಪರಿಹಾರವನ್ನು ನೀಡಲಾಗಿದೆ ಎಂದು ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ.