Free sewing machine

Free sewing machine: ಮಹಿಳೆಯರಿಗೆ ಇಲ್ಲಿದೆ ಗುಡ್ ನ್ಯೂಸ್,  ಜಿಲ್ಲಾ ಪಂಚಾಯತ್ ವತಿಯಿಂದ ಉಚಿವದಾಗಿ  ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ನೀಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಕಲಬುರಗಿ ಜಿಲ್ಲಾ ಪಂಚಾಯತ್ ಕೈಗಾರಿಕಾ ವಿಭಾಗದ ವತಿಯಿಂದ 2024-25ನೇ ಸಾಲಿಗೆ ಜಿಲ್ಲಾ ವಲಯ ಯೋಜನೆಯಡಿ ಉಚಿತವಾಗಿ ವಿದ್ಯುತ್‌ಚಾಲಿತ ಹೊಲಿಗೆಯಂತ್ರ ಪಡೆಯಲು ಕಲಬುರಗಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿರುವ ಪರಿಶಿಷ್ಟ ಪಂಗಡದ ಹೊಲಿಗೆ ವೃತ್ತಿನಿರತ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ (ಗ್ರಾ.ಕೈ) ಉಪನಿರ್ದೇಶಕರು ತಿಳಿಸಿದ್ದಾರೆ.

Free sewing machine ಉಚಿತವಾಗಿ ಹೊಲಿಗೆಯಂತ್ರ ಪಡೆಯಲು ಯಾರು ಯಾರು ಅರ್ಜಿ ಸಲ್ಲಿಸಬಹುದು?

ಕಲಬುರಗಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ವಾಸವಿರುವ ಮಹಿಳಾ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. (ಅರ್ಜಿ ಸಲ್ಲಿಸುವ ಮೊದಲನೇ ದಿನವಾದ ದಿನಾಂಕ: 06-01-2025 ಕ್ಕೆ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 45 ವರ್ಷದೊಳಗಿರಬೇಕು. ಅರ್ಜಿದಾರರು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು.

ಒಂದು ಕುಟುಂಬಕ್ಕೆ ಒಂದು ಅರ್ಜಿ ಸಲ್ಲಿಸಲು ಮಾತ್ರ ಅವಕಾಶವಿರುತ್ತದೆ. ಸರ್ಕಾರದ ಯಾವುದೇ ಯೋಜನೆಯಡಿ ಈಗಾಗಲೇ ಹೊಲಿಗೆಯಂತ್ರವನ್ನು ಪಡೆದಿರುವ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅರ್ಹವಿರುವುದಿಲ್ಲ.      ಸರ್ಕಾರಿ ನೌಕರರು ಅಥವಾ ಅವರ ಅವಲಂಬಿತರು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಇದನ್ನೂ ಓದಿ Anganawadi jobs ಆನ್ಲೈನ್ ನಲ್ಲಿ ಇಲ್ಲೇ ಅರ್ಜಿ ಸಲ್ಲಿಸಿ

ಆಸಕ್ತಿಯುಳ್ಳ ಮಹಿಳೆಯರು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯೊಂದಿಗೆ  ಸಂಬAಧಪಟ್ಟ ಪೂರಕ ದಾಖಲೆಗಳ ಸ್ವಯಂ ದೃಢೀಕೃತ ಪ್ರತಿಗಳನ್ನು ಆಯಾ ತಾಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳಿಗೆ ಅಥವಾ ಕಲಬುರಗಿ ಜಿಲ್ಲಾ ಪಂಚಾಯತ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ (ಗ್ರಾಮೀಣ ಕೈಗಾರಿಕೆ)  ಉಪ ನಿರ್ದೇಶಕರ  ಕಚೇರಿಯಲ್ಲಿ 2025ರ ಜನವರಿ 18 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ, ಕಮಲಾಪೂರ, ಚಿತ್ತಾಪೂರ, ಕಾಳಗಿ ಹಾಗೂ ಶಹಾಬಾದ ತಾಲೂಕಿನ  ಕೈಗಾರಿಕಾ ವಿಸ್ತರಣಾಧಿಕಾರಿಗಳ ಮೊಬೈಲ್ ಸಂಖ್ಯೆ-8951620063, ಆಳಂದ,  ಅಫಜಲಪೂರ, ಜೇವರ್ಗಿ ಹಾಗೂ ಯಡ್ರಾಮಿ ತಾಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳು-9901489919, ಸೇಡಂ ಹಾಗೂ ಚಿಂಚೋಳಿ ಕೈಗಾರಿಕಾ ವಿಸ್ತರಣಾಧಿಕಾರಿಗಳ ಮೊ.ಸಂ.-7259885379 ಹಾಗೂ ಕಲಬುರಗಿ ಜಿಲ್ಲಾ ಪಂಚಾಯತ (ಗ್ರಾಮೀಣ ಕೈಗಾರಿಕೆ)  ಉಪ ನಿರ್ದೇಶಕರ ಕಚೇರಿಯ ದೂ.ಸಂ.-08472-221784, 295784 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

ಅಂಗನವಾಡಿ ಕಾರ್ಯಕರ್ತೆಯರ ತಾತ್ಕಾಲಿಕ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಚಿಂಚೋಳಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಖಾಲಿ ಚನ್ನೂರ ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ ಹುದ್ದೆಯ ತಾತ್ಕಾಲಿಕವಾಗಿ ಆಯ್ಕೆ ಪಟ್ಟಿಯನ್ನು ಚಿಂಚೋಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಜನವರಿ 7 ರಂದು  ಪ್ರಕಟಿಸಲಾಗಿದೆ ಎಂದು ಚಿಂಚೋಳಿ  ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲಿಚ್ಛಿಸುವವರು 2025ರ ಜನವರಿ 14ರ ಸಂಜೆ 5.30 ಗಂಟೆಯೊಳಗಾಗಿ ಸಂಬಂಧಪಟ್ಟ ದಾಖಲೆಗಳೊಂದಿಗೆ ಚಿಂಚೋಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಆಕ್ಷೇಪಣೆಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಚಿಂಚೋಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಅಂತಿಮ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಜೇವರ್ಗಿ ಶಿಶು ಅಭಿವೃದ್ಧಿ ಯೋಜನೆಯಲ್ಲಿ 2022-23ನೇ ಸಾಲಿಗೆ ಜೇವರ್ಗಿ ತಾಲೂಕಿನ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹುದ್ದೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿ, ಅಭ್ಯರ್ಥಿಗಳ ತಾತ್ಕಾಲಿಕ ಹಾಗೂ ಅಂತಿಮ ಪಟ್ಟಿಯನ್ನು ಜೇವರ್ಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ ಎಂದು ಜೇವರ್ಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಆಯ್ಕೆಗೊಂಡ ಅಭ್ಯರ್ಥಿಗಳ ಕುರಿತು ಆಕ್ಷೇಪಣೆಗಳಿದ್ದಲ್ಲಿ ಪೂರಕ ದಾಖಲಾತಿಗಳೊಂದಿಗೆ 2025ರ ಜನವರಿ 13 ರ ಸಂಜೆ 5.30 ಗಂಟೆಯೊಳಗಾಗಿ ಜೇವರ್ಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬೇಕು.

ಅದೇ ರೀತಿ ಅಂತಿಮ ಆಯ್ಕೆಗೊಂಡ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲಾತಿಗಳನ್ನು ಸದರಿ ಕಚೇರಿಗೆ ಖುದ್ದಾಗಿ ಬಂದು ಪರಿಶೀಲಿಸಿಕೊಂಡು ಹೋಗಬೇಕೆಂದು ಅವರು ತಿಳಿಸಿದ್ದಾರೆ.

By admin

Leave a Reply

Your email address will not be published. Required fields are marked *