FRUITS ID

FRUITS ID REGISTRATION ರೈತರು ಈಗ ಫ್ರೂಟ್ಸ್ ಐಡಿ ಪಡೆಯಲು ಮೊಬೈಲ್ ನಲ್ಲಿಯೇ ಅರ್ಜಿ ಸಲ್ಲಿಸಬಹುದು? ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

ಒಟ್ಟಿನಲ್ಲಿ ರೈತರಿಗೆ ಆಧಾರ್ ಕಾರ್ಡ್, ರೇಶನ್ ಕಾರ್ಡ್, ಎಲೆಕ್ಷನ್ ಕಾರ್ಡ್ ಎಷ್ಟು ಮುಖ್ಯವೋ ಅಷ್ಟೇ ಮುಖ್ಯವಾಗಿ ಫ್ರೂಟ್ಸ್ ಐಡಿ ಮುಖ್ಯವಾಗಿರುತ್ತದೆ. ಹಾಗಾಗಿ ರೈತರು ಫ್ರೂಟ್ಸ್ ಐಡಿಯನ್ನು ಮೊಬೈಲ್ ನಲ್ಲಿಯೇ ನೋಂದಣಿ ಮಾಡಿಕೊಳ್ಳಬಹುದು.

ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ, ರೇಷ್ಮೆ ಇಲಾಖೆ, ಮೀನುಗಾರಿಕೆ ಇಲಾಖೆಯ ವತಿಯಿಂದ ಸರ್ಕಾರದ ಸೌಲಭ್ಯಗಳು ಅಂದರೆ ಸಬ್ಸಿಡಿಯಲ್ಲಿ ಸೌಲಭ್ಯ ಪಡೆಯಲು ಫ್ರೂಟ್ಸ್ ಐಡಿ ಕಡ್ಡಾಯವಾಗಿದೆ. ಇಲ್ಲಿಯವರೆಗೆ ಇನ್ನೂಬಹಳ ರೈತರು ಫ್ರೂಟ್ಸ್ ಐಡಿ ಪಡೆದಿಲ್ಲ. ಅಂತಹ ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಫ್ರೂಟ್ಸ್ ಐಡಿ ಪಡೆಯಬಹುದು.

ಜಮೀನು ಉಳುಮೆಯಿಂದ ಬೆಳೆ ಕಟಾವುವರೆಗೆ ಬೇಕಾಗುವ ಕೃಷಿ ಯಂತ್ರೋಪಕರಣಗಳನ್ನು ಸಬ್ಸಿಡಿಯಲ್ಲಿ ಖರೀದಿಸಲು ಫ್ರೂಟ್ಸ್ ಐಡಿ ಬೇಕಾಗುತ್ತದೆ. ಇದರೊಂದಿಗೆ ಬೆಂಬಲ ಬೆಲೆ ಖರೀದಿಗೂ ಫ್ರೂಟ್ಸ್ ಐಡಿ ಕಡ್ಡಾಯಗೊಳಿಸಲಾಗಿದೆ.

Farmers FRUITS ID ಮಾಡಲು ಯಾವ ಯಾವ ದಾಖಲೆ ಬೇಕು?

ಫ್ರೂಟ್ಸ್ ಐಡಿ ಮಾಡಿಕೊಳ್ಳಲು ರೈತರಿಗೆ ಮುಖ್ಯವಾಗಿ ಜಮೀನಿನ ದಾಖಲೆಗಳು ಅಂದರೆ ಎಷ್ಟೇ ಸರ್ವೆ ನಂಬರ್ ಗಳಿರಲಿ ಆ ಎಲ್ಲಾ ಸರ್ವೆ ನಂಬರ್ ಗಳನ್ನು ಸಲ್ಲಿಸಬೇಕು. ಆಧಾರ್ ಕಾರ್ಡ್ ಬೇಕಾಗುತ್ತದೆ. ಬ್ಯಾಂಕ್ ಪಾಸ್ ಬೇಕು, ಇತ್ತೀಚಿನ ಪೋಟೋ ಬೇಕು. ನೀವು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಾಗಿದ್ದರೆ ಆರ್.ಡಿ. ಸಂಖ್ಯೆ ಹೊಂದಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು.

FRUITS ID REGISTRATION ಎಲ್ಲಿ ಮಾಡಿಸಬೇಕು

ಫ್ರೂಟ್ಸ್ ಐಡಿಯನ್ನು ರೈತರು ತಮ್ಮ ವ್ಯಾಪ್ತಿಯಲ್ಲಿರುವ ರೈತ ಸಂಪರ್ಕ ಕೇಂದ್ರದಲ್ಲಿ ಮಾಡಿಸಬೇಕಾಗುತ್ತದೆ. ಫ್ರೂಟ್ಸ್ ಐಡಿ ಮಾಡಿಸಲು ಯಾವ ಯಾವ ದಾಖಲೆ ಬೇಕು ಎಂಬುದನ್ನು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳಿಗೆ ಕೇಳಬಹುದು.

Farmers FID ಯನ್ನುಮೊಬೈಲ್ ನಲ್ಲಿ ಮಾಡಬಹುದೇ?

ಪ್ರೂಟ್ಸ್ ಐಡಿಯನ್ನು ರೈತರು ಮೊಬೈಲ್ ನಲ್ಲೇ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಹೌದು, ಆನ್ಲೈನ್ ನಲ್ಲಿ ಅಂದರೆ ನಿಮ್ಮ ಬಳಿಯಿರುವ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಬೇಕಾದರೆ ಈ

https://fruits.karnataka.gov.in/OnlineUserLogin.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು Citizen Registration ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಗುರುತಿನ ದೃಢೀಕರಣ ಸೇವೆ Identity Valiadation Service ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಆಧಾರ್ ನಲ್ಲಿರುವಂತೆ ಹೆಸರು ಬರೆಯಬೇಕು. ಅದರ ಕೆಳಗಡೆ ಆಧಾರ್ ಸಂಖ್ಯೆ ನಮೂದಿಸಬೇಕು. ನಂತರ I Agree ಆಯ್ಕೆ ಮಾಡಿಕೊಳ್ಳಬೇಕು. ನಂತರ ಸಲ್ಲಿಸಿ / Submit ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ಕೆಳಲಾದ ಅಗತ್ಯ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಈಗಾಗಲೇ ಇದ್ದರೆ ಹೀಗೆ ಚೆಕ್ ಮಾಡಿ

ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಇದ್ದರೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದಕ್ಕಿಂತ ಮುಂಚಿತವಾಗಿ ಚೆಕ್ ಮಾಡಬಹುದು. ಹೌದು, ಆನ್ನಲೈನ್ ನಲ್ಲಿ ಪ್ರೂಟ್ಸ್ ಐಡಿ ಚೆಕ್ ಮಾಡಲು ಈ

https://fruitspmk.karnataka.gov.in/MISReport/GetDetailsByAadhaar.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಫಾರ್ಮರ್ಸ್ ಡಿಟೇಲ್ ಕೆಳಗಡೆ ನಿಮ್ಮ ಆಧಾರ್ ನಂಬರ್ ನಮೂದಿಸಬೇಕು. ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ ಉಚಿತವಾಗಿ ಹೊಲಿಗೆಯಂತ್ರ ನೀಡಲು ಅರ್ಜಿ ಆಹ್ವಾನ

ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಆಗಿದ್ದರೆ ನಿಮ್ಮ ಹೆಸರು, ಫ್ರೂಟ್ಸ್ ಐಡಿ ನಂಬರ್ ಕಾಣಿಸುತ್ತದೆ.ಈ  ಫ್ರೂಟ್ಸ್ ಐಡಿ ನಂಬರ್ ಸಹಾಯದಿಂದ ನೀವು ಸರ್ಕಾರಿ ಯೋಜನೆಗಳ ಮೂಲಕ ವಿವಿಧ ಸೌಲಭ್ಯಗಳನ್ನು ಪಡೆಯಬಹುದು.

Farmers FRUITS ID ಏಕೆ ಕಡ್ಡಾಯವಾಗಿದೆ?

ಈಗ ಫ್ರೂಟ್ಸ್ ಐಡಿ ಮಾಡಿಸುವುದು ಕಡ್ಡಾಯವಾಗಿದೆ. ಹೌದು, ಫ್ರೂಟ್ಸ್ ತಂತ್ರಾಂಶದಲ್ಲಿ ಭೂ ವಿವರಗಳನ್ನು ರೈತರು ನೋಂದಾಯಿಸಿಕೊಳ್ಳಬೇಕು. ಸರ್ಕಾರದ ಯಾವುದೇ ಸೌಲಭ್ಯ ಪಡೆಯಲು ಫ್ರೂಟ್ಸ್ ತಂತ್ರಾಂಶದ ನೋಂದಣಿಯು ಕಡ್ಡಾಯವಾಗಿದೆ. ಕೂಡಲೇ ರೈತರು ತಮ್ಮಮಾಲಿಕತ್ವಕ್ಕೆ ಒಳಪಡುವ ಎಲ್ಲಾ ಸರ್ವೆ ನಂಬರ್ ಗಳ ದಾಖಲಗಳನ್ನು  ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಬೇಕಾಗುತ್ತದೆ.

 

By admin

Leave a Reply

Your email address will not be published. Required fields are marked *