Goat farming training free : ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಉಚಿತವಾಗಿ ಕುರಿ ಮತ್ತು ಮೇಕೆ ಸಾಕಾಣಿಕೆಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಕಲಬುರಗಿ ಎಸ್.ಬಿ.ಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಕುರಿ ಮತ್ತು ಮೇಕೆ ಸಾಕಾಣಿಕೆಗೆ ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಎಸ್.ಬಿ.ಐ ಆರ್ ಸೆಟ್ ನಿರ್ದೇಶಕರು ತಿಳಿಸಿದ್ದಾರೆ.
ಜನವರಿ 16 ರಿಂದ 25 ರವರೆಗೆ ಕುರಿ ಮತ್ತು ಆಡು ಸಾಕಾಣಿಕೆ ತರಬೇತಿ ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಕೆಗೆ ಜನವರಿ 13 ಕೊನೆಯ ದಿನವಾಗಿದೆ. ಜನವರಿ 21 ರಿಂದ 30 ರವರೆಗೆ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಕೆಗೆ ಜನವರಿ 19 ಕೊನೆಯ ದಿನವಾಗಿದೆ
Goat farming training free ತರಬೇತಿಗೆ ಯಾವ ದಾಖಲೆ ಸಲ್ಲಿಸಬೇಕು?
ಈ ತರಬೇತಿ ಸಂದರ್ಭದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ ನೀಡಲಾಗುತ್ತಿದೆ. ವಯೋಮಿತಿ 18 ರಿಂದ 45 ವಯೋಮಾನದೊಳಗಿನ ಬಿಪಿಎಲ್ ಅಂತ್ಯೋದಯ, ರೇಶನ್ ಎಮ್.ಜಿ. ಎನ್.ಆರ್. ಇ.ಜಿ.ಎ ಕಾರ್ಡ್ ಹೊಂದಿದ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಸಂಸ್ಥಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ ಕೊನಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ಕಚೇರಿಯನ್ನು ಪ್ರತಿದಿನ ಬೆಳಗ್ಗೆ 9.30 ರಿಂದ ಸಾಯಂಕಾಲ 5.30 ಗಂಟೆಯವರೆಗೆ ಸಂಪರ್ಕಿಸಲು ಹಾಗೂ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 9448994585,9886781239 ಹಾಗೂ 9900135705 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ಹೈನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯಿಂದ ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 45 ವಯೋಮಾನದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಜನವರಿ ತಿಂಗಳಲ್ಲಿ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ ಮತ್ತು ಫೆಬ್ರವರಿ ತಿಂಗಳಲ್ಲಿ ಮಹಿಳೆಯರಿಗೆ ವಸ್ತ್ರ ವಿನ್ಯಾಸ (ಹೊಲಿಗೆ) ಉಚಿತ ತರಬೇತಿಗಳು ಆರಂಭವಾಗಲಿದ್ದು, ತರಬೇತಿ ಅವಧಿಯಲ್ಲಿ ಊಟ ಹಾಗೂ ವಸತಿಯು ಉಚಿತವಾಗಿರುತ್ತದೆ.
ಇದನ್ನೂ ಓದಿ : FID Check ಆಧಾರ್ ನಂಬರ್ ಹಾಕಿ ಎಫ್ಐಡಿ ಹೀಗೆ ಚೆಕ್ ಮಾಡಿ
ಅಭ್ಯರ್ಥಿಗಳು ತಮ್ಮ ಹೆಸರು ವಿಳಾಸಗಳನ್ನು ನೋಂದಾಯಿಸಲು ಜನವರಿ 10 ಕೊನೆಯ ದಿನವಾಗಿದೆ. ಮೊದಲು ಬಂದವರಿಗೆಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯಸಾಫ್ಟ್ ಸ್ಕಿಲ್ಸ್ ಯೋಗ ತರಬೇತಿ ಹಾಗೂ ಬ್ಯಾಂಕಿಂದ ಸಾಲ ಪಡೆದು ಸ್ವ ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರ್ಕಾರ ಯೋಜನೆಗಳು ಮತ್ತುಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿ ಉಚಿತವಾಗಿ ನೀಡಲಾಗುವುದು.
ಆಸಕ್ತರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್.ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ, ಈ ವಿಳಾಸಕ್ಕೆ ದೂರವಾಣಿ ಸಂಖ್ಯೆ 8970145354,9483485489, 9482188780 ಗೆ ಸಂಪರ್ಕಿಸಬಹುದು.
ಕಿಟ್ ವಿತರಣೆಗೆ ಅರ್ಜಿ ಆಹ್ವಾನ
ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಫಲಾನುಭವಿಗಳಿಗೆ ವೆಲ್ಡಿಂಗ್ ಕಿಟ್ ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಫಲಾನುಭವಿ ಚಾಲ್ತಿಯಲ್ಲಿರುವ ಕಾರ್ಮಿಕ ಗುರುತಿನ ಚೀಟಿ ಆಧಾರ್ ಕಾರ್ಡ್ ಮತ್ತು ಫಲಾನುಭವಿಯ ಭಾವಚಿತ್ರ ಸದರಿ ದಾಖಲಾತಿಗಳನ್ನು ಜನವರಿ 3 ರಿದ 18 ರೊಳಗಾಗಿ ಈ ಕೆಳಕಂಡ ಷರತ್ತಿನ ಅನ್ವಯ ಕಾರ್ಮಿಕ ನಿರೀಕ್ಷಕರ ಕಚೇರಿ ಸಿಂಧಗಿ ವೃತ್ತ ಬಂದಾಳ ರಸ್ತೆ ಬೊಮ್ಮಣ್ಣಿ ಬಿಲ್ಡಿಂಗ್ ಸಿಂದಗಿ ಈ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಸದರಿ ಅವಧಿಯಲ್ಲಿ ಸ್ವೀಕರಿಸಲಾದ ಅರ್ಜಿಗಳನ್ನು ಪರಿಶೀಲಿಸಿ ಜೇಷ್ಠತಾ ಆಧಾರದ ಮೇರೆಗೆ ವಿತರಿಸಲಾಗುವುದು ಎಂದು ಕಾರ್ಮಿಕ ನಿರೀಕ್ಷಕ ಮಲ್ಲಿಕಾರ್ಜುನ ಬಗಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ರೈತರು ಅರ್ಜಿಸಲ್ಲಿಸಬಹುದು. ಕಟ್ಟಡ ಕಾರ್ಮಿಕರು ನೋಂದಾಯಿತ ಒಂದು ವರ್ಷ ಪೂರ್ಣಗೊಂಡಿರಬೇಕು.ಕಾರ್ಮಿಕರ ಗುರುತಿನ ಚೀಟಿ ಚಾಲ್ತಿಯಲ್ಲಿರಬೇಕು. ಕಾರ್ಮಿಕ ಗುರುತಿನ ಚೀಟಿಯಲ್ಲಿ ನಮೂದಿಸಿದ ವೃತ್ತಿಯ ಕಿಟ್ ಗಳನ್ನು ವಿತರಿಸುವುದಾಗಿ ತಿಳಿಸಿದರು.