Good news to farmer : ಈ ಬಾರಿ ಭಾರತದಲ್ಲಿ ಇಡೀ ಋತುವಿನಲ್ಲಿ ಎಲ್ ನಿನೊ ಪರಿಸ್ಥಿತಿಯ ಸಾಧ್ಯತೆ ಇಲ್ಲ ಎಂದು ಹೇಳಿರುವ ಭಾರತೀಯ ಹವಾಮಾನ ಇಲಾಖೆ, ಈ ಮಾನ್ಸೂನ್ನಲ್ಲಿ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
“ಭಾರತವು ನಾಲ್ಕು ತಿಂಗಳ ಮಾನ್ಸೂನ್ ಋತುವಿನಲ್ಲಿ (ಜೂನ್ ನಿಂದ ಸೆಪ್ಟೆಂಬರ್) ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ದೀರ್ಘಾವಧಿಯ ಸರಾಸರಿ 87 ಸೆಂ.ಮೀ.ನಷ್ಟು ಸಂಚಿತ ಮಳೆಯಾಗುವ ಅಂದಾಜು ಮಾಡಲಾಗಿದೆ” ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುಖ್ಯಸ್ಥ ಮೃತ್ಯುಂಜಯ್ ಮೊಹಾಪಾತ್ರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಭಾರತದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಾನ್ಸೂನ್ ಮಳೆಗೆ ಸಂಬಂಧಿಸಿದ ಎಲ್ ನಿನೊ ಪರಿಸ್ಥಿತಿಗಳು ಈ ಬಾರಿ ಅಭಿವೃದ್ಧಿ ಹೊಂದುವ ಸಾಧ್ಯತೆ ಇಲ್ಲ. ದೇಶದ ಕೆಲವು ಭಾಗಗಳು ಈಗಾಗಲೇ ತೀವ್ರ ಶಾಖವನ್ನು ಎದುರಿಸುತ್ತಿವೆ ಮತ್ತು ಏಪ್ರಿಲ್ ನಿಂದ ಜೂನ್ ಅವಧಿಯಲ್ಲಿ ಗಮನಾರ್ಹವಾಗಿ ಹೆಚ್ಚಿನ ಸಂಖ್ಯೆಯ ಉಷ್ಣ ಅಲೆ ದಿನಗಳನ್ನು ನಿರೀಕ್ಷಿಸಲಾಗಿದೆ. ಇದು ವಿದ್ಯುತ್ ಗ್ರಿಡ್ಗಳನ್ನು ಒತ್ತಡಕ್ಕೆ ಒಳಪಡಿಸಬಹುದು ಮತ್ತು ನೀರಿನ ಕೊರತೆಗೆ ಕಾರಣವಾಗಬಹುದು ಎಂದು ಅವರು ಹೇಳಿದರು.
Good news to farmer ಮುಂಬರುವ ಮುಂಗಾರು ರಾಜ್ಯಾದ್ಯಂತ ರೈತ ಸಮುದಾಯಕ್ಕೆ ಹರ್ಷ ತರುವುದು ಖಚಿತ, ವಿಶೇಷವಾಗಿ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಕರ್ನಾಟಕದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ.
ಉತ್ತಮ ಮುಂಗಾರು ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳು ಉತ್ತಮ ಮಟ್ಟಕ್ಕೆ ತಲುಪುವುದಲ್ಲದೆ, ಅಂತರ್ಜಲ ಮಟ್ಟ ಕೂಡ ಹೆಚ್ಚಾಗುವ ನಿರೀಕ್ಷೆಗಳಿವೆ,
ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕೃಷಿ ಹವಾಮಾನ ತಜ್ಞ ಮತ್ತು ಮಾಜಿ ರಿಜಿಸ್ಟ್ರಾರ್ ಪ್ರೊ. ಎಂ.ಬಿ. ರಾಜೇಗೌಡ ಅವರ ಮಾತನಾಡಿ, ಜೂನ್-ಸೆಪ್ಟೆಂಬರ್ ಅಂತ್ಯ ಅಥವಾ ಅಕ್ಟೋಬರ್ ಮೊದಲ ವಾರದ ನಡುವಿನ ನೈಋತ್ಯ ಮಾನ್ಸೂನ್ ಅವಧಿಯಲ್ಲಿ 860 ಮಿ.ಮೀ. ಸಾಮಾನ್ಯ ಮಳೆಯಾಗಿದೆ. ಈ ಬಾರಿ ಸಾಮಾನ್ಯಕ್ಕಿಂತ ಸುಮಾರು 5 ಪ್ರತಿಶತ ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ. ಸರಾಸರಿ ಮಳೆಯ 900 ಮಿ.ಮೀ.ಯಾಗಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ ಈ ಮಹಿಳೆಯರ ಖಾತೆಗೆ ಜಮೆಯಾಯಿತು ಗೃಹಲಕ್ಷ್ಮೀ ಹಣ 2025
ಈ ವರ್ಷ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಕರ್ನಾಟಕ ಎರಡೂ ಕಡೆ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯಾಗುವ ನಿರೀಕ್ಷೆಗಳಿವೆ ಎಂದು ತಿಳಿಸಿದ್ದಾರೆ.
ಭಾರೀ ಮಳೆ ರೈತರಿಗೆ ಉತ್ತಮವಾಗಿದ್ದರೂ, ಸಾಮಾನ್ಯ ಜನ ಜೀವನಕ್ಕೆ ಅಡ್ಡಿಯುಂಟು ಮಾಡುವ ಸಾಧ್ಯತೆಗಳಿವೆ. ಹೀಗಾಗಿ, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳು ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತರಿಗೆ ಮಳೆಗಾಲಕ್ಕೆ ಸಿದ್ಧತೆಗಳ ನಡೆಸುವಂತೆ ಸೂಚನೆಗಳನ್ನು ನೀಡಿದೆ.
ಪ್ರವಾಹ ಪೀಡಿತ ಪ್ರದೇಶಗಳನ್ನು ಗುರುತಿಸುವುದು, ಈ ಪ್ರದೇಶಗಳಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸಲು ಸಲಹೆ ನೀಡಿದೆ.
24X7 ಜಿಲ್ಲಾ ತುರ್ತು ನಿರ್ವಹಣಾ ಕೇಂದ್ರಗಳನ್ನು ತೆರೆಯುವುದು, ಅಧಿಕಾರಿಗಳ ಫೋನ್ ಸಂಖ್ಯೆಗಳನ್ನು ವಾಟ್ಸಾಪ್ ಗುಂಪುಗಳಲ್ಲಿ ಹಂಚುವುದು. ಇದರಿಂದ ಸಂಕಷ್ಟಕ್ಕೊಳಗಾಗುವ ನಿರ್ದಿಷ್ಟ ಪ್ರದೇಶಗಳ ಜನರು ನೆರವಿಗೆ ಯಾರನ್ನು ಸಂಪರ್ಕಿಸಬೇಕೆಂದು ತಿಳಿದಂತಾಗುತ್ತದೆ ಎಂದು ತಿಳಿಸಲಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ (KSNDMC) ಮತ್ತು ಇತರ ಅಧಿಕಾರಿಗಳು ಮಳೆಗಾಲದ ಸಮಯದಲ್ಲಿ ಪ್ರವಾಹದ ಬಗ್ಗೆ ಕಾಲಕಾಲಕ್ಕೆ ಜನರಿಗೆ -ಕರಾವಳಿ ಪ್ರದೇಶಗಳಲ್ಲಿರುವವರಿಗೆ ಎಚ್ಚರಿಕೆ ನೀಡಬೇಕು. ಅಣೆಕಟ್ಟುಗಳು ತುಂಬಿದಾಗ ನೆರೆಯ ರಾಜ್ಯಗಳಲ್ಲಿನ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲು ಸೂಚನೆಗಳನ್ನು ನೀಡಬೇಕು ಎಂದು ಹೇಳಿದೆ.