Gruhalakshmi money : ಗೃಹಲಕ್ಷ್ಮೀ ಯೋಜನೆಯ ಹಣ ಯಾರು ಯಾರಿಗೆ ಜಮೆಯಾಗುತ್ತದೆ ಎಂಬುದನ್ನು ಈಗ ಫಲಾನುಭವಿಗಳುತಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಹೌದು, ಯಾರ ಸಹಾಯವೂ ಇಲ್ಲದೆ ಫಲಾನುಭವಿಗಳು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
ತಮಗೆಲ್ಲಾ ಗೊತ್ತಿದ್ದ ಹಾಗೆ ಈಗಾಗಲೇ ಗೃಹಲಕ್ಷ್ಮೀ ಯೋಜನೆಯ ಹಣ ಕೆಲವರಿಗೆ ಜಮೆಯಾಗುತ್ತಿದ್ದರೆ ಇನ್ನೂ ಕೆಲವರಿಗೆ ಜಮೆಯಾಗುತ್ತಿಲ್ಲ. ಯಾವ ಕಾರಣಕ್ಕಾಗಿ ಹಣ ಜಮೆಯಾಗುತ್ತಿಲ್ಲ ಎಂಬುದೇ ಗೊತ್ತಿರುವುದಿಲ್ಲ. ಕೆಲವರಿಗೆ ನಾಲ್ಕೈದು ಕಂತಿನ ಹಣ ಜಮೆಯಾಗಿದೆ ನಂತರ ಜಮೆಯಾಗುವುದು ನಿಂತು ಹೋಗಿದೆ. ಇನ್ನೂ ಕೆಲವರಿಗೆ ಆರಂಭಂದಿಂದಲೇ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗುತ್ತಿಲ್ಲ. ನೋಂದಣಿ ಮಾಡಿಸಿದ ನಂತರ ಕೆಲವುಫಲಾನುಭವಿಗಳಿಗೆ ಒಂದೂ ಕಂತಿನ ಹಣ ಜಮೆಯಾಗಿಲ್ಲ. ಯಾರು ಯಾರು ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗುತ್ತಿಲ್ಲವೋ ಅಂತಹವರು ಯಾವ ಕಾರಣಕ್ಕಾಗಿ ಜಮೆಯಾಗುತ್ತಿಲ್ಲ ಎಂಬುದನ್ನು ಇಲ್ಲೇ ಚೆಕ್ ಮಾಡಬಹುದು.
Gruhalakshmi money ಗೃಹಲಕ್ಷ್ಮೀ ಯೋಜನೆಗೆ ಯಾರು ಯಾರು ಅರ್ಹರಿದ್ದಾರೆ?
ರಾಜ್ಯದ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದ ಕಾಂಗ್ರೆಸ್ ಗೃಹಲಕ್ಷ್ಮೀ ಯೋಜನೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೀಡಿರುವಂತಹ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯರಿಗೆ ಮಾತ್ರ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗುತ್ತದೆ. ಒಂದು ವೇಳೆ ರೇಶನ್ ಕಾರ್ಡ್ ನಲ್ಲಿ ಕುಟುಂಬದ ಯಜಮಾನಿಎಂದು ನಮೂದಾಗಿಲ್ಲವಾದರೆ ಆ ಮಹಿಳೆ ಎಲ್ಲಾ ಅರ್ಹತೆ ಪಡೆದಿದ್ದರೂ ಸಹ ಅವರಿಗೆ ಜಮೆಯಾಗಲ್ಲ. ಹಾಗಾಗಿ ತಮ್ಮ ಅಗತ್ಯ ದಾಖಲೆಗಳನ್ನು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಸಲ್ಲಿಸಬಹುದು.
ಗೃಹಲಕ್ಷ್ಮೀ ಯೋಜನೆಗೆ ಯಾರು ಅನರ್ಹರಾಗಿದ್ದಾರೆ?
ಗೃಹಲಕ್ಷ್ಮೀ ಯೋಜನೆಗೆ ಐದು ಎಕರೆಗಿಂತ ಹೆಚ್ಚು ಭೂಮಿ ಹೊಂದಿರುವವರು ಅರ್ಹರಾಗಿರುವುದಿಲ್ಲ ಎನ್ನಲಾಗುತ್ತಿದೆ. ಆದರೆ ಈ ಕುರಿತು ಸರ್ಕಾರ ಅದಿಸೂಚನೆಯಲ್ಲಿ ತಿಳಿಸಿಲ್ಲ. ಆದಾಯ ತೆರಿಗೆ ಪಾವತಿ ಮಾಡುವವರ ಕುಟುಂಬದವರಿಗೂ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುವುದಿಲ್ಲ. ಸರ್ಕಾರಿ ಉದ್ಯೋಗಿಗಳಿಗೆ, ಪೆನ್ಶನ್ ಪಡೆಯುವವರಿಗೆ ಯೋಜನೆಯ ಲಾಭ ಸಿಗುವುದಿಲ್ಲ.
ಇದನ್ನೂ ಓದಿ : ಈ ವ್ಯಾಟ್ಸ್ ಆ್ಯಪ್ ಮೂಲಕ ಗ್ರಾಮ ಪಂಚಾಯತಿ ಮಾಹಿತಿ ಪಡೆಯಿರಿ
ಜಿಎಸ್.ಟಿ ಪಾವತಿ ಮಾಡುತ್ತಿರುವ ಮಹಿಳೆಯರಿಗೆ ಯೋಜನೆಯ ಲಾಭ ಸಿಗುವುದಿಲ್ಲ. ವೃತ್ತಿ ತೆರಿಗೆ ಪಾವತಿ ಮಾಡುವವರಿಗೂ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುವುದಿಲ್ಲ.
ಪಡಿತರ ಚೀಟಿಯಲ್ಲಿ ಯಾರು ಮುಖ್ಯಸ್ಥರಿದ್ದಾರೆ? ಇಲ್ಲೇ ಚೆಕ್ ಮಾಡಿ
ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಮಾತ್ರಕ್ಕೆ ಎಲ್ಲಾ ಮಹಿಳೆಯರಿಗೆ ಹಣ ಜಮೆಯಾಗುವುದಿಲ್ಲ. ಹೌದು, ತಮ್ಮ ರೇಶನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರು ಎಂದು ಇರಬೇಕು. ಆಗ ಮಾತ್ರ ಅವರ ಖಾತೆಗೆ ಜಮೆಯಾಗುತ್ತದೆ. ಒಂದು ವೇಳೆ ಪುರುಷರ ಹೆಸರು ಕುಟುಂಬದ ಮುಖ್ಯಸ್ಥರೆಂದು ನಮೂದಾಗಿದ್ದರೆ ಅವರ ಖಾತೆಗೆ ಹಣ ಜಮೆಯಾಗುವುದಿಲ್ಲ. ಹಾಗಾಗಿ ನಿಮ್ಮ ರೇಶನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರು ಯಾರೆಂಬುದನ್ನು ಇಲ್ಲೇ ಚೆಕ್ ಮಾಡಿ.
ಬಿಪಿಎಲ್, ಅಂತ್ಯೋದಯ ಹಾಗೂ ಎಪಿಎಲ್ ಕಾರ್ಡ್ ಹೊಂದಿರುವವರು ಕುಟುಂಬದ ಮುಖ್ಯಸ್ಥರು ಯಾರೆಂಬುದನ್ನು ಚೆಕ್ ಮಾಡಲು ಈ
https://ahara.kar.nic.in/Home/EServices
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಇ ಪಡಿತ ಚೀಟಿ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ಕಾಣುವ ಹಳ್ಳಿ ಪಟ್ಟಿ ಮೇಲೆ ಕ್ಲಿಕ್ ಮಾಡಿದ ನಂತರ ಇನ್ನೊಂದು ಪೇಜ್ ಓಪನ್ ಆಗುವುದು. ಅಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತ್ ನಿಮ್ಮ ಊರು ಆಯ್ಕೆ ಮಾಡಿಕೊಂಡು ಗೋ ಮೇಲೆ ಕ್ಲಿಕ್ ಮಾಡಿ ಕುಟುಂಬದ ಮುಖ್ಯಸ್ಥರು ಯಾರೆಂಬುದನ್ನು ಚೆಕ್ ಮಾಡಬಹುದು.