Gruhalakshmi number : ಕರ್ನಾಟಕ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಕುಂದುಕೊರತೆ ವಿಚಾರಿಸಲು ಸೋಮವಾರಪೇಟೆ ತಾಲೂಕಿಗೆ ಸಂಬಂಧಿಸಿದ ಫಲಾನುಭವಿಗಳು ಮಹಿಳಾ ಮತ್ತುಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾ ಕಚೇರಿ ಸೋಮವಾರಪೇಟೆ ಇಲ್ಲಿ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.
ಕುಶಾಲನಗರ ತಾಲೂಕಿಗೆ ಸಂಬಂಧಿಸಿದಂತೆ ಫಲಾನುಭವಿಗಳು ಪ್ರತಿ ಮಂಗಳವಾರ ಕಾರ್ಯ ನಿರ್ವಹಣಾಧಿಕಾರಿ ಅವರ ಕಚೇರಿ, ಮುಳ್ಳುಸೋಗೆ ಗ್ರಾಮ ಪಂಚಾಯತಿ ಇಲ್ಲಿ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು..
ಹೊಸದಾಗಿ ಪಡಿತರ ಚೀಟಿಯನ್ನು ಪಡೆದವರು ಹತ್ತಿರದ ಗ್ರಾಮಒನ್ ಸೆಂಟರಗಳಿಗೆ ತೆರಳಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.
Gruhalakshmi number ಗೃಹಲಕ್ಷ್ಮೀ ಸಹಾಯವಾಣಿ ನಂಬರಿಗೆ ಕರೆ ಮಾಡಿ
ದೂರವಾಣಿ ಸಂಖ್ಯೆ 08276 282281, 08276200023 ಗೆ ಸಂಪರ್ಕಿಸಬಹುದು ಎಂದು ಸೋಮವಾರಪೇಟೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.
ತರಕಾರಿ ಬೆಳೆ ನರ್ಸರಿ ತರಬೇತಿಗೆ ಅರ್ಜಿ ಆಹ್ವಾನ
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್.ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಜನವರಿ 16 ರಿಂದ 10 ದಿನಗಳ ಉಚಿತ ತರಕಾರಿ ಬೆಳೆಗಳ ನರ್ಸರಿ ತರಬೇತಿ ಮತ್ತು ಫೆಬ್ರವರಿ 3 ರಿಂದ 13 ದಿನಗಳ ಉಚಿತ ವಾಣಿಜ್ಯ ತೋಟಗಾರಿಕೆ ತರಬೇತಿ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜನವರಿ 14 ರೊಳಗಾಗಿ ತರಬೇತಿಗೆ ಹೆಸರನ್ನು ನೋಂದಾಯಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ದೂರವಾಣಿ ಸಂಖ್ಯೆ 9980510717, 9483455489 ಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಡಿಸೆಂಬರ್ 31 ಕ್ಕೆನೇಮಕಾತಿ ಸಂದರ್ಶನ
ಡಿಸೆಂಬರ್ 31 ರಂದು ಮಂಗಳವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ನಗರದ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ನಡೆಯಲಿದೆ.
ಮೂರಕ್ಕೂಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಲ್.ಎಲ್.ಸಿ, ಪಿಯುಸಿ, ಡಿಪ್ಲೋಮಾ, ಐಟಿಐ ಯಾವುದೇ ಪದವಿ ಹೊಂದಿರುವ 18 ರಿಂದ 30 ವಯೋಮಾನದೊಳಗಿನ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಲಾಗುವುದು.
ಇದನ್ನೂ ಓದಿ : Pm kisan hana ಯಾರಿಗೆ ಜಮೆಯಾಗುತ್ತದೆ? ಇಲ್ಲೇ ಚೆಕ್ ಮಾಡಿ
ಅಭ್ಯರ್ಥಿಗಳು 5 ಬಯೋಡಾಟಾ ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರ ಹಾಗೂ ಫೋಟೋಗಳೊಂದಿಗೆ ಭಾಗವಹಿಸಬಹುದು. ಮಾಹಿತಿಗಾಗಿ ನಗರದ ಸ್ಟೇಡಿಯಂ ತಿರುವು, ಹಳೇ ವೈಶಾಲಿ ಗೇಟ್ ಹತ್ತಿರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 8105619020,9945587060, 9964528212, 7019755147 ಗೆ ಸಂಪರ್ಕಿಸಬಹುದುಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆಗೆ ಯಾರು ಯಾರು ಅರ್ಹರಿದ್ದಾರೆ?
ರಾಜ್ಯದ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದ ಕಾಂಗ್ರೆಸ್ ಗೃಹಲಕ್ಷ್ಮೀ ಯೋಜನೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೀಡಿರುವಂತಹ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯರಿಗೆ ಮಾತ್ರ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗುತ್ತದೆ. ಒಂದು ವೇಳೆ ರೇಶನ್ ಕಾರ್ಡ್ ನಲ್ಲಿ ಕುಟುಂಬದ ಯಜಮಾನಿಎಂದು ನಮೂದಾಗಿಲ್ಲವಾದರೆ ಆ ಮಹಿಳೆ ಎಲ್ಲಾ ಅರ್ಹತೆ ಪಡೆದಿದ್ದರೂ ಸಹ ಅವರಿಗೆ ಜಮೆಯಾಗಲ್ಲ. ಹಾಗಾಗಿ ತಮ್ಮ ಅಗತ್ಯ ದಾಖಲೆಗಳನ್ನು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಸಲ್ಲಿಸಬಹುದು.
ಗೃಹಲಕ್ಷ್ಮೀ ಯೋಜನೆಗೆ ಯಾರು ಅನರ್ಹರಾಗಿದ್ದಾರೆ?
ಗೃಹಲಕ್ಷ್ಮೀ ಯೋಜನೆಗೆ ಐದು ಎಕರೆಗಿಂತ ಹೆಚ್ಚು ಭೂಮಿ ಹೊಂದಿರುವವರು ಅರ್ಹರಾಗಿರುವುದಿಲ್ಲ ಎನ್ನಲಾಗುತ್ತಿದೆ. ಆದರೆ ಈ ಕುರಿತು ಸರ್ಕಾರ ಅದಿಸೂಚನೆಯಲ್ಲಿ ತಿಳಿಸಿಲ್ಲ. ಆದಾಯ ತೆರಿಗೆ ಪಾವತಿ ಮಾಡುವವರ ಕುಟುಂಬದವರಿಗೂ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುವುದಿಲ್ಲ. ಸರ್ಕಾರಿ ಉದ್ಯೋಗಿಗಳಿಗೆ, ಪೆನ್ಶನ್ ಪಡೆಯುವವರಿಗೆ ಯೋಜನೆಯ ಲಾಭ ಸಿಗುವುದಿಲ್ಲ.
ಜಿಎಸ್.ಟಿ ಪಾವತಿ ಮಾಡುತ್ತಿರುವ ಮಹಿಳೆಯರಿಗೆ ಯೋಜನೆಯ ಲಾಭ ಸಿಗುವುದಿಲ್ಲ. ವೃತ್ತಿ ತೆರಿಗೆ ಪಾವತಿ ಮಾಡುವವರಿಗೂ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುವುದಿಲ್ಲ.