Kisan credit card

Kisan credit card : ರೈತರ ಬಳಿ ಈಗ ಕಿಸಾನ್ ಕ್ರೇಡಿಟ್ ಕಾರ್ಡ್ ಇದ್ದರೆ ಸಾಕು, ಬ್ಯಾಂಕಿನಲ್ಲಿ 3 ಲಕ್ಷ ರೂಪಾಯಿಯವರೆಗೆ ಸಾಲ ಸೌಲಭ್ಯ ಸಿಗಲಿದೆ.

ಹೌದು,  ರೈತರು ವಿವಿಧ ಕೃ ಷಿ ಚಟುವಟಿಕೆ ಕೈಗೊಳ್ಳಲು ಕಡಿಮೆ ಬಡ್ಡಿದರದಲ್ಲಿ ಬ್ಯಾಂಕಿನಿಂದ ಕ್ರೆಡಿಟ್ ಕಾರ್ಡ್ ದಿಂದ ಸಾಲ ಪಡೆಯಬುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

ಕೇಂದ್ರ ಸರ್ಕಾರವು ಜಾರಿಗೆ ತಂದ ಹಲವಾರು ಯೋಜನೆಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯೂ ಒಂದಾಗಿದೆ. ಈ ಯೋಜನೆಯಡಿಯಲ್ಲಿ ರೈತರು  ಕಡಿಮೆ ಬಡ್ಡಿದರದಲ್ಲಿ ಅಂದರೆ ಶೇ. 4 ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯಬಹುದು. ಹೌದು, ಕಿಸಾನ್ ಕ್ರೆಡಿಟ್ ಕಾರ್ಡ್ ದಿಂದ ರೈತರು 3 ಲಕ್ಷ ರೂಪಾಯಿಯವರೆಗೆ ಸಾಲ ಪಡೆಯಬಹುದು. ಈ ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಲು ಯಾವ ರೈತರು ಅರ್ಜಿ ಸಲ್ಲಿಸಬೇಕು? ಯಾವ ಬ್ಯಾಂಕಿನಲ್ಲಿ ಸಾಲ ಸಿಗಲಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Kisan credit card ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಲು ಬೇಕಾದ ಅರ್ಹತೆಗಳು

ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಲು ರೈತರು ಭಾರತೀಯ ನಿವಾಸಿಯಾಗಿರಬೇಕು. ಯಾವ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದಾರೋ ಅದೇ ಬ್ಯಾಂಕ್ ಶಾಖೆಯಲ್ಲಿ ಕ್ರೆಡಿಟ್ ಕಾರ್ಡ್ ಪಡೆಯಬಹುದು.  ಈ ಕಾರ್ಡನ್ನು ಪಶುಸಂಗೋಪನೆ, ಮೀನುಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗೆ ಸಾಲ ನೀಡಲಾಗುವುದು. ಅರ್ಜಿದಾರರ ವಯಸ್ಸು 18 ರಿಂದ 75 ವಯೋಮಾನದೊಳಗಿರಬೇಕು.

ಇದನ್ನೂ ಓದಿ Krishimela ಜನವರಿ 11 ರಿಂದ 13 ರವರೆಗೆ ಬೃಹತ್ ಕೃಷಿ ಮೇಳ

ರೈತರ ಬಳಿ ಜಮೀನಿನ ದಾಖಲೆ ಇರಬೇಕು. ಆಧಾರ್ ಕಾರ್ಡ್  ಹೊಂದಿರಬೇಕು. ಪಾಸ್ ಪೋರ್ಟ್ ಸೈಜಿನ ಫೋಟೋ ಇರಬೇಕು. ಬ್ಯಾಂಕ್ ಪಾಸ್ ಬುಕ್ ಇರಬೇಕು. ರೈತರು ಬೇರೆ ಯಾವುದೇ ಬ್ಯಾಂಕಿನಲ್ಲಿ ಸಾಲ ಪಡೆದಿರಬಾರದು.

ಕಿಸಾನ್ ಕ್ರೆಡಿಟ್ ಕಾರ್ಡ್ ಅರ್ಜಿ ಎಲ್ಲಿ ಸಿಗುತ್ತದೆ?

ರೈತರು ಕಿಸಾನ್ ಕ್ರೆಡಿಟ್ ಕಾರ್ಡನ್ನು  ಆನ್ಲೈನ್ ನಲ್ಲೇ ಪಡೆದುಕೊಳ್ಳಬಹುದು. ಆನಲೈನ್ ಕಿಸಾನ್ ಕ್ರೆಡಿಟ್ ಕಾರ್ಡ್ ಅರ್ಜಿ ಪಡೆಯಲು ಸಮಸ್ಯೆಯಾಗುತ್ತಿದ್ದರೆ ರಾಜ್ಯದ ಎಲ್ಲಾ ಬ್ಯಾಂಕಿನಲ್ಲಿ ಸಿಗುತ್ತದೆ. ನೀವು ಅಲ್ಲಿ ಪಡೆದುಕೊಳ್ಳಬಹುದು.

ಒಂದು ವೇಳೆ ನೀವು ಆನ್ಲೈನ್ ನಲ್ಲಿ ಅರ್ಜಿ ಪಡೆಯಬೇಕಾದರೆ ಈ

https://pmkisan.gov.in/Documents/Kcc.pdf

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು, ಆಗ ಕಿಸಾನ್ ಕ್ರೆಡಿಟ್ ಕಾರ್ಡ್ ಫಾರ್ಮ್ ಓಪನ್ ಆಗುತ್ತದೆ. ಇದನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಕೇಳಲಾದ ಎಲ್ಲಾ ದಾಖಲೆಗಳನ್ನು ಹತ್ತಿರದ ಬ್ಯಾಂಕಿನಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ನಂತರ ಬ್ಯಾಂಕ್ ಮ್ಯಾನೇಜರ್ ಅರ್ಜಿ ಪರಿಶೀಲಿಸಿ 15 ದಿನಗಳೊಳಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡುವರು. ಈ ಕಾರ್ಡ್ ಸಹಾಯದಿಂದ ರೈತರು 3 ಲಕ್ಷ ರೂಪಾಯಿಯವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯಬಹುದು.

ಕಿಸಾನ್ ಕ್ರೆಡಿಟ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸುವಾಗ ನಿಮ್ಮ ಹಳೆಯ ಕೃಷಿ ಸಾಲದ ಬಗೆಗಿನ ಸಂಪೂರ್ಣ ಮಾಹಿತಿ ನೀಡಬೇಕಾಗುತ್ತದೆ. ಅದರ ಬಗ್ಗೆ ಸರಿಯಾದ ಮಾಹಿತಿಯನ್ನು ಒದಗಿಸದಿದ್ದರೆ ಕಿಸಾನ್ ಕ್ರೇಡಿಟ್ ಕಾರ್ಡ್ ನೀಡಲಾಗುವುದಿಲ್ಲ. ಮೂರು ವರ್ಷಗಳ ಅವಧಿಗೆ ಸಾಲ ಲಭ್ಯವಿರುತ್ತದೆ.

ಯಾವ ಚಟುವಟಿಕೆಗಳಿಗೆ ಸಾಲ ಪಡೆಯಬಹುದು?

ರೈತರು ತಮ್ಮ ಹೊಲಗಳಿಗೆ ಬಿತ್ತನೆ ಮಾಡುವುದು, ಬೆಳೆಗಳಿಗೆ ರಸಗೊಬ್ಬರ ಹಾಕುವುದು ಸೇರಿದಂತೆ ಇತರ ಕೃಷಿ ಚಟುವಟಿಕೆಗಳಿಗೆ ಸಾಲ ಪಡೆಯಲು ಕಿಸಾನ್ ಕ್ರೇಡಿಟ್ ಕಾರ್ಡ್ ಬಳಸಬಹುದು.

ಮೀನುಗಾರಿಕೆಗೆ ವಿಸ್ತರಣೆಯಾಯಿತು ಕಿಸಾನ್ ಕ್ರೆಡಿಟ್ ಕಾರ್ಡ್

ರೈತರ ಬಳಿ ಕಿಸಾನ್ ಕ್ರೇಡಿಟ್ ಕಾರ್ಡ್ ಇದ್ದರೆ ನಿಮ್ಮ ಹತ್ತಿರದ ಬ್ಯಾಂಕುಗಳಿಂದ ನಿಮಗೆ ಕೃಷಿ ಚಟುವಟಿಕೆ, ಪಶುಪಾಲನೆಗೆ ಹಾಗೂ ಮೀನುಗಾರಿಕೆಗೂ ಸಾಲ ಸೌಲಭ್ಯ ನೀಡಲಾಗುವುದು.

By admin

Leave a Reply

Your email address will not be published. Required fields are marked *