Pm kisan hana: ಪಿಎಂ ಕಿಸಾನ್ ಹಣ ಯಾವ ರೈತರಿಗೆ ಜಮೆಯಾಗುತ್ತದೆ ಯಾವ ರೈತರಿಗೆ ಜಮೆಯಾಗುವುದಿಲ್ಲ ಎಂಬುದನ್ನುರೈತರು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಫಲಾನುಭವಿಗಳ ಪಟ್ಟಿಯನ್ನುಬಿಡುಗಡೆ ಮಾಡಲಾಗಿದೆ. ರೈತರುತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಗ್ರಾಮವಾರು ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮಹೆಸರಿರುವುದನ್ನು ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
ಪಿಎಂ ಕಿಸಾನ್ ಹಣ ಜಮೆಯಾಗುವುದು ನಿಂತುಹೋಗಿದೆ? ಇಲ್ಲಿ ಚೆಕ್ ಮಾಡಿ
ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿದ ನಂತರ ಆರಂಭದಲ್ಲಿ ಹಣ ಜಮೆಯಾಗುತ್ತಿತ್ತು. ಈಗ ಜಮೆಯಾಗುತ್ತಿಲ್ಲವೇ? ಯಾ ಇಲ್ಲಿಯವರೆಗೆ ನಿಮಗೆ ಜಮೆಯಾದ ಕಂತುಗಳ ಬಗ್ಗೆ ಚೆಕ್ ಮಾಡಬಹುದು. ಯಾವ ಕಂತಿನವರೆಗೆ ಹಣ ಜಮೆಯಾಗಿದೆ ಎಂಬುದನ್ನು ಸಹ ಇಲ್ಲೇ ಚೆಕ್ ಮಾಡಬಹುದು.
ಪಿಎಂ ಕಿಸಾನ್ ಯೋಜನೆಯ ಹಣ ನಿಮಗೆ ಯಾವ ಕಾರಣಕ್ಕಾಗಿ ಜಮೆ ಮಾಡುವುದನ್ನು ನಿಲ್ಲಿಸಲಾಗಿದೆ ಎಂಬುದನ್ನು ಚೆಕ್ ಮಾಡಲು ಈ
https://pmkisan.gov.in/BeneficiaryStatus_New.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ Know your status pm kisan ಕೆಳಗಡೆ ಪಿಎಂ ಕಿಸಾನ್ ನೋಂದಣಿ ಸಂಖ್ಯೆ ನಮೂದಿಸಬೇಕು.ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿಯನ್ನು ನಮೂದಿಸಿ ನೀವು ನಿಮಗೆ ಯಾವ ಕಾರಣಕ್ಕಾಗಿ ಪಿಎಂ ಕಿಸಾನ್ ಹಣ ಜಮೆಯಾಗಿಲ್ಲ ಎಂಬುದನ್ನು ಚೆಕ್ ಮಾಡಬಹುದು.
Pm kisan hana ನಿಮಗೆ ಪಿಎಂ ಕಿಸಾನ್ ನೋಂದಣಿ ಸಂಖ್ಯೆ ಗೊತ್ತಿಲ್ಲದಿದ್ದರೆ ಏನು ಮಾಡಬೇಕು?
ನಿಮಗೆ ಪಿಎಂ ಕಿಸಾನ್ ನೋಂದಣಿ ಸಂಖ್ಯೆ ಗೊತ್ತಿಲ್ಲದಿದ್ದರೆ ಅಲ್ಲಿ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು.ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು.ನಂತರ ನಿಮ್ಮ ಹೆಸರು ಹಾಗೂ ನೋಂದಣಿಸಂಖ್ಯೆ ಕಾಣಿಸುತ್ತದೆ. ನೋಂದಣಿ ಸಂಖ್ಯೆ ಕಾಪಿ ಮಾಡಿಕೊಂಡು ಬ್ಯಾಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನೋಂದಣಿ ಸಂಖ್ಯೆ ನಮೂದಿಸಿ ಆಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಡಿಟೇಲ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಹೆಸರು, ತಂದೆಯ ಹೆಸರು, ನಿಮ್ಮ ಊರು, ಮೊಬೈಲ್ ನಂಬರ್ ಕಾಣಿಸುತ್ತದೆ.
ಪಿಎಂ ಕಿಸಾನ್ ಸ್ಟೇಟಸ್ ನಲ್ಲಿರಲೇಬೇಕಾದ ಮಾಹಿತಿ
ಎಫ್.ಟಿ.ಓ ಪ್ರೊಸೆಸಡ್ ಯಸ್ ಇರಬೇಕು. ಅದರ ಕೆಳಗಡೆನಿಮಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ. ಯಾವ ಬ್ಯಾಂಕಿನಲ್ಲಿ ಹಣ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.
ಇದನ್ನೂ ಓದಿ : Free Goat training ಉಚಿತ ಮೇಕೆ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ
ನಿಮಗೆ ಕೊನೆಯ ಕಂತು ಯಾವಾಗ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.
Reason of ineligibility ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಯಾವ ಕಾರಣಕ್ಕಾಗಿ ಹಣ ಜಮೆಯಾಗುತ್ತಿಲ್ಲ ಎಂಬ ಮಾಹಿತಿ ಕಾಣಿಸುತ್ತದೆ.
Eligibility status ಮೇಲೆ ಕ್ಲಿಕ್ ಮಾಡಬೇಕು. ಲ್ಯಾಂಡ್ ಸೀಡಿಂಗ್, ಇಕೆವೈಸಿ ಸ್ಟೇಟಸ್ ಯಸ್ ಇರಬೇಕು. ಲ್ಯಾಂಡ್ ಸೀಡಿಂಗ್ ಇಲ್ಲದಿದ್ದರೆ ಬ್ಯಾಂಕಿನಲ್ಲಿ ಆಧಾರ್ ಕಾರ್ಡ್ ನೀಡಿ ಸೀಡಿಂಗ್ ಮಾಡಿಸಿಕೊಳ್ಳಬೇಕು.
ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹೊಸ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿರುವುದನ್ನು ಚೆಕ್ ಮಾಡಲು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನೀವು ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಹೋಬಳಿ ಆಯ್ಕೆ ಮಾಡಿಕೊಂಡು ನಿಮ್ಮ ಊರು ಆಯ್ಕೆ ಮಾಡಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗಲಿದೆ. ಅಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.
ಅಲ್ಲಿ ಹೆಸರುಗಳು ಎ ಅಕ್ಷರದಿಂದ ಆರಂಭವಾಗುತ್ತದೆ. ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದನ್ನು ನೀವು ಚೆಕ್ ಮಾಡಲು ಅಲ್ಲಿ ಕಾಣುವ ಮುಂದಿನ ಪೇಜ್ ನಂಬರ್ ಮೇಲೆ ಕ್ಲಿಕ್ ಮಾಡಬೇಕು.