Pm kisan money credited

Pm kisan money credited: ರೈತರಿಗೆ ಗುಡ್ ನ್ಯೂಸ್ ಇಲ್ಲಿದೆ. ಇಂದು ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಜಮೆಯಾಗಲಿದೆ. ಹೌದು, ದೇಶದ 9.8 ಕೋಟಿ ರೈತರಿಗೆ 22000 ಕೋಟಿ ರೂಪಾಯಿ ಹಣ ನೇರವಾಗಿ ಅವರ ಖಾತೆಗೆ ಜಮೆಯಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಪಿಎಂ ಕಿಸಾನ್ ಯೋಜನೆಯಡಿ ರೈತರು ಪ್ರತಿ ನಾಲ್ಕು ತಿಂಗಳಿಗೆ 2 ಸಾವಿರ ರೂಪಾಯಿ ಹಣ ಪಡೆಯಲಿದ್ದಾರೆ. ವರ್ಶಕ್ಕೆ  6 ಸಾವಿರ ರೂಪಾಯಿ ರೈತರ ಖಾತೆಗೆ ಜಮೆಯಾಗಲಿದೆ. 18ನೇ ಕಂತಿನ ಹಣ ಅಕ್ಟೋಬರ್ ತಿಂಗಳಲ್ಲಿ ಜಮೆಯಾಗಿತ್ತು. ಈಗ 19ನೇ ಕಂತಿನ ಹಣ ಇಂದು ಜಮೆಯಾಗಲಿದೆ.

ಈ ಹಣ ಬಿಡುಗಡೆ ಕುರಿತು ಕೇಂದ್ರ ಗೃಷಿ ಸಚಿವ ಶಿವರಾಜ ಸಿಂಗ್ ಚೌಹ್ವಾಣ ಪ್ರಧಾನಮಂತ್ರಿಗಳು ಸೋಮವಾರ ಪಿಎಂ ಕಿಸಾನ್ 19ನೇ ಕಂತಿನ ಹಣವನ್ನು ಬಿಹಾರ್ ರಾಜ್ಯದ  ಬಾಗಲ್ಪುರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಿದ್ದಾರೆ. ಈ ಹಣ ನೇರವಾಗಿ ಅರ್ಹ ರೈತರ ಖಾತೆಗೆಜಮೆಯಾಗಲಿದೆ.ಒಟ್ಟು 22 ಸಾವಿರ ಕೋಟಿ ಹಣ 9.8 ಕೋಟಿ ರೈತರ ಪ್ರಯೋಜನಕ್ಕೆ ಸಿಗಲಿದೆ. 18ನೇ ಕಂತಿನ ಹಣವನ್ನು 9.6 ಕೋಟಿ ಕೋಟಿ ರೈತರ ಖಾತೆಗೆ ಜಮೆ ಮಾಡಲಾಗಿತ್ತು. ಇದೀಗ ಸಂಖ್ಯೆಯಲ್ಲಿ ಹೆಚ್ಚಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ ನಿಮಗೆಷ್ಟು ಬೆಳೆ ವಿಮೆ ಹಣ ಜಮೆ? ಇಲ್ಲೇ ಚೆಕ್ ಮಾಡಿ

ತಮಗೆಲ್ಲಾ ಗೊತ್ತಿದ್ದ ಹಾಗೆ ಪಿಎಂ ಕಿಸಾನ್ ಯೋಜನೆಯನ್ನು 2019 ರಲ್ಲಿ ದೇಶದ ಬಡ ರೈತರಿಗಾಗಿ ಜಾರಿಗೆ ತರಲಾಗಿದೆ.  ಇಲ್ಲಿಯವರೆಗೆ ಪಿಎಂ ಕಿಸಾನ್ ಫಲಾನುಭವಿಗಳಿಗೆ 18 ಕಂತುಗಳಲ್ಲಿ ಒಟ್ಟು 36 ಸಾವಿರ ರೂಪಾಯಿ ಜಮೆಯಾಗಿದೆ. ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣವನ್ನು ಕಳೆದ ಅಕ್ಟೋಬರ್ 5 ರಂದು ರೈತರ ಖಾತೆಗೆ ಜಮೆ ಮಾಡಲಾಗಿತ್ತು. ಈಗ ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣವನ್ನು ಬಿಹಾರ್ ರಾಜ್ಯದ ಭಾಗಲಪುರದಲ್ಲಿ ನಡೆಯುವ ರೈತರ ಕಾರ್ಯಕ್ರಮದಲ್ಲಿ ಬಿಡುಗಡೆಮಾಡಲಾಗುವುದು.  ದೇಶದ ಪ್ರಧಾನಿ ನರೇಂದ್ರ ಮೋದಿಯವರು ಡಿಬಿಟಿ ಮೂಲಕ ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಿದ್ದಾರೆ. ದೇಶದ 9 ಕೋಟಿಗೂ ಹೆಚ್ಚಿನ ರೈತರ ಖಾತೆಗೆ ಈ ಹಣ ಜಮೆಯಾಗಲಿದೆ.

Pm kisan money credited ಇಕೆವೈಸಿ ಆದ ರೈತರಿಗೆ ಖಾತೆಗೆ ಮಾತ್ರ ಪಿಎಂ ಕಿಸಾನ್ ಹಣ ಜಮೆ 

ಪಿಎಂ ಕಿಸಾನ್ ಯೋಜನೆಯ ಪೋರ್ಟಲ್ ನಲ್ಲಿ ಆಧಾರ್ ಆಧಾರಿತ ಓಟಿಪಿ ದೃಢೀಕರಣಕ್ಕಾಗಿ ಕಿಸಾನ್ ಕಾರ್ನರ್ ನಲ್ಲಿರುವ ಇ-ಕೆವೈಸಿ ಆಯ್ಕೆಯನ್ನು ಕ್ಲಿಕ್  ಮಾಡಿ ಪ್ರಕ್ರಿಯೆ ಪೂರ್ಣಗೊಳಿಸಬಹುದು.  ರೈತರು ಈ

https://pmkisan.gov.in/aadharekyc.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಅಲ್ಲಿ ಪಿಎಂ ಕಿಸಾನ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು ನಿಮ್ಮಆಧಾರ್ ಕಾರ್ಡ್ ನ್ನು ನಮೂದಿಸೇಕು. ನಂತರ search ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ಹೆಸರಿಗೆ ಇಕೆವೈಸಿ ಆಗಿದ್ದರೆ ಅಲ್ಲಿ EKYC is Already Done ಎಂಬ ಮೆಸೇಜ್ ಕಾಣಿಸುತ್ತದೆ. ಅಲ್ಲಿ ನೀವು ಓಕೆ ಬಟನ್ ಮೇಲೆ ಕ್ಲಿಕ್ ಮಾಡಬಹುದು.

ಪಿಎಂ ಕಿಸಾನ್ ಈ ಪಟ್ಟಿಯಲ್ಲಿರುವ ರೈತರಿಗೆ ಹಣ ಜಮೆ

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಹೆಸರು ಕೆಳಗಡೆ ನೀಡಲಾದ ಪಟ್ಟಿಯಲ್ಲಿದ್ದರೆ ಮಾತ್ರ ಜಮಯಾಗಲಿದೆ. ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಚೆಕ್ ಮಾಡಲು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿಗೆ ಫಲಾನುಭವಿಗಳ ಚೆಕ್ ಮಾಡುವ ಪೇಜ್ ಓಪನ್ ಆಗುತ್ತದೆ.

ಅಲ್ಲಿ ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಬ್ಲಾಕ್ ನಲ್ಲಿ ನಿಮ್ಮ ತಾಲೂಕು ಆಯ್ಕೆ ಮಾಡಿಕೊಂಡು ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ Get Report ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮೂರಿನಲ್ಲಿ ಯಾವ ಯಾವ ರೈತರು ಫಲಾನುಭವಿಗಳಿದ್ದಾರೆ ಎಂಬ ಪಟ್ಟಿ ಕಾಣಿಸುತ್ತದೆ.

By admin

Leave a Reply

Your email address will not be published. Required fields are marked *