Rain alert from Today: ಬೆಂಗಳೂರು ನಗರ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆಯಾಗುವಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಿಸಿಲಿನಿಂದ ತತ್ತರಿಸಿದ ರಾಜ್ಯದ ಜನತೆಗೆ ಗುಡ್ ನ್ಯೂಸ್ ಇಲ್ಲಿದೆ. ಹೌದು ಇದೇ ಮಾರ್ಚ್ 11 ರಿಂದ 13 ರವರೆಗೆ ಮೂರು ದಿನಗಳ ಕಾಲ ಗುಡುಗು ಸಹಿತ ಮಳಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಿಸಿಲಿನ ಝಳದಿಂದ ತತ್ತರಿಸಿದ ಜನತೆಗೆ ಕೊಂಚ ನಿರಾಳ ಸಿಗಲಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಿಗೆ ಮಳೆಯಾಗುತ್ತದೆ ಎಂಬ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದಾಗಿ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಹಾಸನ, ಕೊಡುಗು, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಕೋಲಾರ ಹಾಗೂ ತುಮಕೂರಿನಲ್ಲಿ ಮಾರ್ಚ್ 11 ರಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ನಿಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬದನ್ನು ಈಗ ನೀವು ಮನೆಯಲ್ಲೇ ಕುಳಿತು ತಿಳಿದುಕೊಳ್ಳಬಹುದು. ಹೌದು, ಹವಾಮಾನ ಇಲಾಖೆಯ ವರುಣಮಿತ್ರ ಸಹಾಯವಾಣಿ ನಂಬರ್ 9243345433 ಗೆ ಕರೆ ಮಾಡಿದರೆ ಸಾಕು, ನಿಮ್ಮೂರಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿ ಸಿಗುತ್ತದೆ.
ಇದರೊಂದಿಗೆ ಅಂದಿನ ಹವಾಮಾನ ವರದಿ ನೀಡಲಾಗುವುದು. ಗಾಳಿ, ಬಿಸಿಲಿಲ ಪ್ರಮಾಣ ಹೇಗಿರಲಿದೆ ಎಂಬ ಮಾಹಿತಿಯೂ ಸಿಗುತ್ತದೆ.
ಇದನ್ನೂ ಓದಿ : ನಿಮ್ಮ ಜಮೀನು ಜಂಟಿಯಾಗಿದೆಯೇ? ಇಲ್ಲೇ ಚೆಕ್ ಮಾಡಿ
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿಲು ಮತ್ತಷ್ಟು ಹೆಚ್ಚಿಗಲಿದೆ ಉತ್ತರ ಒಳನಾಡಿನಲ್ಲಿ ಮಾರ್ಚ್ 15ರವರೆಗೆ ಒಣಹವೆ ಇರಲಿದೆ. ಈಗಾಗಲೇ ಕೆಲ ರಾಜ್ಯಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
ಇದೀಗ ಮಾರ್ಚ್ 12 ರ ನಂತರ ಮತ್ತೆ ರಾಜ್ಯದಲ್ಲಿ ತಕ್ಕ ಮಟ್ಟಿಗೆ ಮಳೆಯಾಗುವ ಸಾಧ್ಯತೆ ಇದೆ. ಫೆಬ್ರವರಿ ತಿಂಗಳಲ್ಲಿ ರಾಜ್ಯದೆಲ್ಲೆಡೆ ತಡೆಯಲಾಗದಷ್ಟು ಬಿಸಿಲ ಅಬ್ಬರ ಇತ್ತು, ಮಾರ್ಚ್ ಹಾಗೂ ಏಪ್ರಿಲ್‌ನಲ್ಲಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಅದರ ಜೊತೆಗೆ ಮಳೆಯೂ ಬೀಳುವುದರಿಂದ ಕೊಂಚ ಮಟ್ಟಿಗೆ ಖುಷಿಯ ವಿಚಾರ.. ದಕ್ಷಿಣ ಒಳನಾಡಲ್ಲಿ ಮಳೆಯಾದ್ರೂ ಉತ್ತರಕ್ಕೆ ಮಾತ್ರ ಬಿಸಿಲಿನ ಬೇಗೆ ತಪ್ಪಿದ್ದಲ್ಲ
Rain alert from Today ಮೇಘದೂತ್ ಆ್ಯಪ್ ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.
ಗುಡುಗು ಸಿಡಿಲಿನ ಆರ್ಭಟವಿದ್ದಾಗ ನಾಗಕಿಕರು ತೆಗೆದುಕೊಳ್ಳಬೇಕಾದ ಎಚ್ಚರಿಕೆಗಳು
ಸಿಡಿಲು ಮೊಬೈಲ್ ಆ್ಯಪ್ ಬಳಸುವ ಮೂಲಕ ನಾಗರಿಕರು ಸಿಡಿಲಿನ ಬಗ್ಗೆ ಮುಂಚಿತವಾಗಿ ಮಾಹಿತಿ ಪಡೆಯಬಹುದು. ಸಿಡಿಲಿನ ಸಂಭವನೀಯತೆ ಇದ್ದಲ್ಲಿ ಬಯಲಿನಲ್ಲಿ ಮಾಡಬೇಕಾದ ಕೆಲಸಗಳನ್ನು ಮುಂದೂಡಿ. ಮನೆಯಲ್ಲಿಯ ಸುರಕ್ಷಿತವಾಗಿ ಇರಲು ಸಹಾಯವಾಗುತ್ತದೆ.
ಸಿಡಲು ಬಡಿಯುವ ಮುನ್ಸೂಚನೆ ಇದ್ದಾಗಮನೆಯ ಕಿಟಕಿಯಿಂದ ದೂರ ಇರಬೇಕು. ಸಿಡಿಲು ಬಡಿಯುವ ಸಂದರ್ಭದಲ್ಲಿ ದೂರವಾಣಿ, ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಬಾರದು.
ಗೃಹಪಯೋಗಿ ಉಪಕರಣಗಳ ಪ್ಲಗ್ ಗಳನ್ನು ತೆಗೆದಿರಿಸಬೇಕು. ಸಿಡಿಲಿನ ಸಂದರ್ಭದಲ್ಲಿ ಮನೆಯ ಹೊರಗಡೆ ಸ್ಟಾನ ಮಾಡುವುದು ಸುರಕ್ಷಿತವಲ್ಲ. ಹೊರಾಂಗಣದಲ್ಲಿದ್ದವರು ಸುರಕ್ಷಿತ ಕಟ್ಟಡಗಳ ಒಳಗೆ ಹೋಗಬೇಕು. ಎತ್ತರದ ಪ್ರದೇಶಗಳಲ್ಲಿ ಸಿಡಿಲು ಬಡಿಯುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಸಾದ್ಯವಾದಷ್ಟು ತಗ್ಗು ಪ್ರದೇಶಗಳಿಗೆ ತೆರಳಬೇಕು.
ವಾಹನ ಚಲಿಸುವಾಗ ಸಿಡಿಲು ಬಂದಾಗ ಮರ ಹಾಗೂ ವಿದ್ಯುತ್ ಕಂಬಗಳಿಂದ ವಾಹನವನ್ನು ಸಾಧ್ಯವಾದಷ್ಟು ದೂರ ನಿಲ್ಲಿಸಬೇಕು. ಮರಗಳ ಕೆಳಗಡೆ ನಿಲ್ಲದೆ ವಾಹನದೊಳಗೆ ಇರುವುದು ಸೂಕ್ತ. ಬಸ್ ಗಳಲ್ಲಿ ಪ್ರಯಾಣಿಸುವಾಗ ಕಿಟಕಿಗಳ ಗಾಜುಗಳನ್ನು ಮುಚ್ಚಬೇಕು ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರ ಸಲಹೆ ನೀಡಿದೆ.