rain alert here : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಬುಧವಾರ ಎಂಟು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಹಾಗೂ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಬೀದರ್, ವಿಜಯಪುರ, ಬಾಗಲಕೋಟೆ, ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಬೆಳಗಾವಿ, ಗದಗ, ಹಾಗೂ ಧಾರವಾಡ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿಬೀಸಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿಯ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಭಾಗಶ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ.
ಇದನ್ನೂ ಓದಿ ಪಿಎಂ ಕಿಸಾನ್ ಹಣ ರೈತರ ಖಾತೆಗೆ ಜಮೆ
ಮೇ 5 ರವರೆಗೂ ರಾಜ್ಯದ ವಿವಿಧ ಕಡೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಇದರೊಂದಿಗೆ ಉತ್ತರ ಒಳನಾಡಿನ ಹಲವು ಜಿಲ್ಲೆಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
heavy rain alert again ನಿಮ್ಮೂರಿನಲ್ಲಿ ಮಳೆ ಯಾವಾಗ ಬರಲಿದೆ?
ನಿಮ್ಮೂರಿನಲ್ಲಿಇಂದು ಮಳೆಯಾಗುತ್ತೋ ಇಲ್ಲವೋ ಹಾಗೂ ನಿಮ್ಮೂರಿನಲ್ಲಿ ಮಳೆ ಯಾವಾಗಬರುತ್ತದೆ ಎಂಬ ಮಾಹಿತಿಯನ್ನು ಸಾರ್ವಜನಿಕರು ಪಡೆಯಬಹುದು.ಹೌದು, ವರುಣಮಿತ್ರ ಸಹಾಯವಾಣಿ ನಂಬರ್ 9243345433 ಗೆ ಕರೆ ಮಾಡಿದರೆ ಸಾಕು, ಈಗ ನೀವು ದಿನನಿತ್ಯದ ಹವಾಮಾನ ವರದಿಯನ್ನುಪಡೆದುಕೊಳ್ಳಬಹುದು. ಇದು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ. ಹಾಗಾಗಿ ರೈತರು, ಸಾರ್ವಜನಿಕರು ಯಾವುದೇ ಸಮಯದಲ್ಲಿ ಕರೆ ಮಾಡಿ ಮಳೆಯ ಮಾಹಿತಿಯನ್ನುಪಡೆಯಬಹುದು.
heavy rain alert again ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.