Rain alert this week : ಬಿರುಬಿಸಿಲ ಆರ್ಭಟತಿಂದ ತತ್ತರಿಸಿದ ಜನತೆಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ಈ ವಾರದಲ್ಲಿಯೂ ಸಹ ಪೂರ್ವ ಮುಂಗಾರು ಮಳೆ ರಾಜ್ಯದ 24 ಜಿಲ್ಲೆಗಳಲ್ಲಾಗಲಿದೆ ಎಂಬ ಮಾಹಿತಿಯನ್ನು ನೀಡಿದೆ.
ರಾಜ್ಯದಲ್ಲಿ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ 24 ಜಿಲ್ಲೆಗಳಿಗೆ ಭಾನುವಾರ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಿದೆ.
Rain alert this week ಯಾವ ಯಾವ ಜಿಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ?
ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಮುಂದುವರೆಯಲಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿಯ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡದ ಬಹುತೇಕ ಕಡೆ ಒಣಹವೆ ಇರಲಿದ್ದು ಕೆಲವೆಡೆ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ : ಉಚಿತವಾಗಿ ಮನೆ ನಿರ್ಮಿಸಲು ಅರ್ಜಿ ಆಹ್ವಾನ
ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಸೋಮವಾರ, ಮಂಗಳವಾರವೂ 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಆ ಜಿಲ್ಲೆಗಳಿಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಮಳೆ ಉತ್ತಮವಾಗಿ ಆಗುತ್ತಿದೆ. ಮುಂಗಾರು ಮಳೆಯೂ ಸಹ ಈ ವರ್ಷ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತಮ ಫಸಲು ಬಂದು ಕೃಷಿಯನ್ನೇ ಪ್ರಮುಖವಾಗಿ ನೆಚ್ಚಿಕೊಂಡಿರುವ ಆರ್ಥಿಕತೆಗೆ ಇಂಬು ಸಿಗುವ ಆಶಾವಾದ ಚಿಗುರಿದೆ.
ತಮಿಳುನಾಡು ಮತ್ತು ಈಶಾನ್ಯ ವಲಯದ ಬಹುತೇಕ ಪ್ರದೇಶಗಳಲ್ಲಿ ಸಾಧಾರಣಕ್ಕಿಂತ ಕಡಿಮೆ ಮಳೆಯಾಗಬಹುದು ಎಂದು ದೀರ್ಘಕಾಲಿನ ಮುಂಗಾರು ಮುನ್ಸೂಚನೆಯಲ್ಲಿ ಹವಾಮಾನ ಇಲಾಖೆ ತಿಳಸಿದೆ. ಅದೇ ವೇಳೆ ಮಳೆ ಕೊರತೆ ಎದುರುಸಿತ್ತಿರುವ ಮರಾಠವಾಡ ಹಾಗೂ ತೆಲಂಗಾಣ ರಾಜ್ಯದಲ್ಲಿಯೂ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆಯಿದೆ.
ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.
ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.