Yuvanidhi yojane : ಪದವಿ ಅಥವಾ ಸ್ನಾತಕೋತ್ತರ ಪದವಿ ಪಾಸಾದವರಿಗೆ 3 ಸಾವಿರ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ 1500 ರೂಪಾಯಿ ನಿರುದ್ಯೋಗಿ ಭತ್ಯೆ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, 2023 ಹಾಗೂ 2024 ರಲ್ಲಿ ಪದವಿ / ಸ್ನಾತಕೋತ್ತರ ಪದವಿ / ಡಿಪ್ಲೋಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಪದವಿ ಅಥವಾ ಸ್ನಾತಕೋತ್ತರ ಅಥಾ ಡಿಪ್ಲೋಮಾ ಉತ್ತೀರ್ಣರಾಗಿ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ ಅಥವಾ ಖಾಸಗಿ ಉದ್ಯೋಗ ಹೊಂದಿಲ್ಲದವರು. ಸ್ವಯಂ ಉದ್ಯೋಗ ಹೊಂದಿಲ್ಲದವರು ಅಥವಾ ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವವರು ಕರ್ನಾಟಕದಲ್ಲಿ ವಾಸವಿರುವವರು ಕನಿಷ್ಠ 6 ವರ್ಷಗಳವರೆಗೆ ಪದವಿ ಅಥವಾ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೋಮಾ ಅಧ್ಯಯನ ಮಾಡದವರು. ಅರ್ಜಿ ಸಲ್ಲಿಸಬಹುದು.
ಈ ಯೋಜನೆಯಡಿ ಪ್ರತಿ ತಿಂಗಳು ಪದವಿ ಹಾಗೂ ಸ್ನಾತಕೋತ್ತರ ಪದವೀಧರರಿಗೆ 3 ಸಾವಿರ ರೂಪಾಯಿಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ 1500 ರೂಪಾಯಿಗಳ ನಿರುದ್ಯೋಗ ಭತ್ಯೆ ನೀಡಲಾಗುವುದು. ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾ ಪ್ರಮಾಣ ಪತ್ರ ದಾಖಲೆಗಳೊಂದಿಗೆ ಅರ್ಹ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಬೇಕು.
ಇದನ್ನು ಓದಿ : Gruhalakshmi number ಗೃಹಲಕ್ಷ್ಮೀ ಹಣ ಜಮೆಗೆ ಇಲ್ಲಿ ಕರೆ ಮಾಡಿ
ಅದೇ ರೀತಿ ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್ ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅವರು ಯುವ ನಿಧಿ ಯೋಜನೆಯಡಿ 2024ರ ನೋಂದಣಿ ಪ್ರಕ್ರಿಯೆಯ ಪ್ರಚಾರ ಅಭಿಯಾನಕ್ಕೆಇತ್ತೀಚೆಗೆ ಚಾಲನೆ ನೀಡಿದರು.
Yuvanidhi yojane ಏನಿದು ಕರ್ನಾಟಕ ಯುವ ನಿಧಿ ಯೋಜನೆ?
ಕರ್ನಾಟಕ ಯುವ ನಿಧಿ ಯೋಜನೆಯನ್ನು ರಾಜ್ಯದ ಪದವೀಧರ / ಡಿಪ್ಲೋಮಾ ಪಡೆದ ನಿರುದ್ಯೋಗಿ ವಿದ್ಯಾವಂತ ಯುವ ಜನರಿಗೆ ನಿರುದ್ಯೋಗ ಭತ್ಯೆ ನೀಡಲು ಈ ಯೋಜನೆಯನ್ನು ಘೋಷಣೆ ಮಾಡಿದೆ.
ಯುವ ನವಿಧಿ ಯೋಜನೆಯ ಕೆಲವು ಷರತ್ತು ಹಾಗೂ ಅರ್ಹತೆಯ ಮಾನದಂಡಗಳ ಮಾಹಿತಿ
2024 ರ ವರ್ಷದಲ್ಲಿ ತೇರ್ಗಡೆಯಾಗಿ. ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಸಿಗದೆಯಿರುವ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್ಗಗಳು ಸೇರಿದಂತೆ) ಪ್ರತಿ ತಿಂಗಳು 3000 ರೂಪಾಯಿ (ಮೂರು ಸಾವಿರ ರೂಪಾಯಿ ಮಾತ್ರ) ನಿರುದ್ಯೋಗ ಭತ್ತೆ ನೀಡಲಾಗುವುದು. ಅದೇ ರೀತಿ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1500 ರೂಪಾಯಿ (ಒಂದು ಸಾವಿರದ ಐದನೂರು ರೂಪಾಯಿಗಳು ಮಾತ್ರ) ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರಿಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನೀಡಲು ಯುವ ನಿಧಿ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುಮೋದನೆ ನೀಡಿ ಸರ್ಕಾರ ಆದೇಶಿಸಿದೆ.
ಯುವನಿಧಿ ಯೋಜನೆಯ ಷರತ್ತು ಹಾಗೂ ನಿಬಂಧನೆಗಳು
ಪದವಿ / ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೆ ಇರುವ ಕನ್ನಡಿಗರಿಗೆ ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ. ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗಳಿಸಲಾಗುವುದು. ಭತ್ಯೆಯನ್ನು ಡಿಬಿಟಿ ಮೂಲಕ ಒದಗಿಸಲಾಗುವುದು. ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಸದ್ಯ ಅರ್ಜಿ ಕರೆದಿಲ್ಲ. ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು. ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.
ಯೋಜನೆಗೆಯಾರು ಅರ್ಹರಾಗಿರುವುದಿಲ್ಲ
ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿಧ್ಯಾಭ್ಯಾಸ ಮುಂದವರೆಸುವವರು. ಶಿಶಿಕ್ಷು (ಅಪ್ರೆಂಟಿಸ್) ವೇತನವನ್ನು ಪಡೆಯುತ್ತಿರುವುವವರು ಅರ್ಹರಾಗಿರುವುದಿಲ್ಲ. ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದವರು ಸಹ ಈ ಯೋಜನೆಗೆ ಅರ್ಹರಾಗಿರುವುದಿಲ್ಲ. ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕುಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರು ಈ ಯೋಜನೆಗೆ ಅರ್ಹರಾಗಿರುವುದಿಲ್ಲ.